– ನಾಗೇಂದ್ರ ವಿರುದ್ಧ ಮೂರು ದೋಷಾರೋಪ ಪಟ್ಟಿ ಸಲ್ಲಿಸಿದ ಸಿಬಿಐ ಅಧಿಕಾರಿಗಳು
ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿ ನಾಗೇಂದ್ರಗೆ (Nagendra) ಬಿಗ್ ಶಾಕ್ ಎದುರಾಗಿದೆ. ವಾಲ್ಮೀಕಿ ಬಹುಕೋಟಿ ಹಗರಣ (Valmiki Corporation Scam) ಪ್ರಕರಣದಲ್ಲಿ ನಾಗೇಂದ್ರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.
ನಾಗೇಂದ್ರ ವಿರುದ್ಧ ಸಿಬಿಐ ಅಧಿಕಾರಿಗಳು ಮೂರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮೂರು ಚಾರ್ಜ್‌ಶೀಟ್‌ನಲ್ಲಿ ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಹಗರಣ | ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ – ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಸಿಬಿಐ ಅರ್ಜಿ
89 ಕೋಟಿ ಹಗರಣದಲ್ಲಿ ನಾಗೇಂದ್ರ ಸಿಲುಕಿದ್ದರು. ಸದ್ಗುರು ಟ್ರಸ್ಟ್ ಎಂದು ನಕಲಿ ಅಕೌಂಟ್ ಸೃಷ್ಟಿಸಿದ್ದರು. ಇದೇ ದುಡ್ಡಿನಲ್ಲಿ ಕೋಟ್ಯಂತರ ಹಣ ಸ್ವಂತಕ್ಕೆ ಬಳಕೆ ಮಾಡಿರುವುದು ಸಾಬೀತಾಗಿದೆ.
ಇದೇ ಹಣದಲ್ಲಿ ಐಷಾರಾಮಿ ಕಾರು ಖರೀದಿ ಮಾಡಿದ್ದಾರೆ. ನಾಗೇಂದ್ರ ಮತ್ತು ನೆಕ್ಕುಂಟಿ ನಾಗರಾಜ್ ಸೇರಿದಂತೆ 30 ಜನರ ವಿರುದ್ಧ ಸಿಬಿಐ 3 ದೋಷಾರೋಪ ಪಟ್ಟಿ ಸಲ್ಲಿಸಿದೆ.
ಈಗಾಗಲೇ ಜಾರಿ ನಿರ್ದೇಶನಾಲಯ (ಇ.ಡಿ)ದಿಂದ ನಾಗೇಂದ್ರ ಬಂಧನಕ್ಕೆ ಒಳಗಾಗಿದ್ದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಮೇಲೆ ತನಿಖೆ ನಡೆಸಲಾಗಿತ್ತು. ಇದನ್ನೂ ಓದಿ: ವಾಲ್ಮೀಕಿ ಹಗರಣ – ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು
