ಬೆಂಗಳೂರು: ರಾಜ್ಯ ಕಾಂಗ್ರೆಸ್‍ಗೆ ಮತ್ತೊಂದು ಬಿಗ್ ಶಾಕ್ ಸಿಕ್ಕಿದೆ. ಕಾಂಗ್ರೆಸ್ ಪಿಲ್ಲರ್ ಅಂತಾನೇ ಫೇಮಸ್ ಆಗಿರೋ ನಾಯಕನಿಗೆ ಸಿಬಿಐ ಶಾಕ್ ನೀಡಿದೆ.
ಭ್ರಷ್ಟಾಚಾರದ ಆರೋಪದ ಮೇಲೆ ಕಾಂಗ್ರೆಸ್‍ನ ಪ್ರಭಾವಿ ಮುಖಂಡ ಆರ್.ಎಲ್ ಜಾಲಪ್ಪ ಮೇಲೆ ಸಿಬಿಐ ಎಫ್‍ಐಆರ್ ದಾಖಲು ಮಾಡಿದೆ. ದಲಿತರು, ಹಿಂದುಳಿದವರ ಹೆಸರಲ್ಲಿ ಜಾಲಪ್ಪ ಭಾರೀ ಭ್ರಷ್ಟಾಚಾರ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ರಾಷ್ಟ್ರೀಯ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಸಿಕ್ಕಿದೆ.
Advertisement
Advertisement
ಮೆಡಿಕಲ್ ಕಾಲೇಜು ಸೀಟು ಹಗರಣದಲ್ಲಿ ದೇವರಾಜ ಅರಸ್ ಶಿಕ್ಷಣ ಸಂಸ್ಥೆಗಳ ಮಾಲೀಕರು ಆಗಿರುವ ಆರ್.ಎಲ್.ಜಾಲಪ್ಪ ಸೇರಿದಂತೆ ಆಂಧ್ರದ ನಾಲ್ವರು ಪ್ರಭಾವಿಗಳ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿದೆ. ದೇವರಾಜು ಅರಸು ಮೆಡಿಕಲ್ ಕಾಲೇಜು, ಎಜುಕೇಷನ್ ಅಂಡ್ ರೀಸರ್ಚ್ ಸಂಸ್ಥೆಯಲ್ಲಿ ಗೋಲ್‍ಮಾಲ್ ನಡೆದಿದ್ದು, ಶಿಕ್ಷಣ ಸಂಸ್ಥೆಯಲ್ಲಿ ಅನಧಿಕೃತವಾಗಿ ಮೆಡಿಕಲ್ ಕೋರ್ಸ್ ತೆರೆದ ಗಂಭೀರ ಆರೋಪ ಕೇಳಿಬಂದಿದೆ.
Advertisement
Advertisement
ಮೆಡಿಕಲ್ ಕೋರ್ಸ್ ತೆಗೆದು ಹಿಂದುಳಿದವರ ಹೆಸರಲ್ಲಿ ಹೆಚ್ಚು ಸೀಟು ಸೃಷ್ಟಿಸಿ ಹಣ ಲೂಟಿ ಮಾಡಿದ್ದಾರೆ ಎನ್ನಲಾಗಿದೆ. ಮೆಡಿಕಲ್ ವಿದ್ಯಾರ್ಥಿಗಳ ಹೆಸರಲ್ಲಿ ಜಾಲಪ್ಪ ಶಿಕ್ಷಣ ಸಂಸ್ಥೆ ಲೂಟಿ ಮಾಡಿದ್ದು, ಈ ಬಗ್ಗೆ ಆಂಧ್ರ ಎಸಿಬಿಯಿಂದ ದಾಖಲಾದ ದೂರಿನ ಮೇಲೆ ಸಿಬಿಐನಿಂದಲೂ ಎಫ್‍ಐಆರ್ ದಾಖಲಾಗಿದೆ. ಕಾನೂನು ಬಾಹಿರವಾಗಿ ಎಂಬಿಬಿಎಸ್, ಎಂಎಸ್, ಎಂಡಿ ಕೋರ್ಸ್‍ಗಳಿಗೆ ಸೀಟು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಜಾಲಪ್ಪ ಶಿಕ್ಷಣ ಸಂಸ್ಥೆಯಿಂದ ಭಾರೀ ಲಂಚ ಪಡೆದ ಆರೋಪದಲ್ಲಿ ಆರ್‍ಎಲ್ ಜಾಲಪ್ಪ ಜೊತೆ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದ ನಾಲ್ವರ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಸೇವೆಗಳ ಉಪ ನಿರ್ದೇಶಕ ಎಸ್.ಅಜಯ್‍ಕುಮಾರ್, ಕರ್ನೂಲ್ ಮೆಡಿಕಲ್ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ. ಜಿ. ನರೇಂದ್ರ ರೆಡ್ಡಿ, ನಾಂದೇಡ್‍ನ ಮೆಡಿಕಲ್ ಕಾಲೇಜು ಪ್ರಾಧ್ಯಾಪಕರಾದ ಡಾ.ಶಂಕರ್ ರಾವ್ ಚಹ್ವಾಣ್ ಹಾಗೂ ಡಾ.ಎಸ್.ಆರ್ ವಕೋಡೆ ವಿರುದ್ಧ ಎಫ್‍ಐಆರ್ ದಾಖಲಾಗಿದೆ.