ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಸಿಬಿಐ (CBI) ಬಂಧಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇದಕ್ಕೆ ಕೆಲವೇ ಗಂಟೆಗಳ ಮುಂಚೆ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದೆ. ಇದನ್ನೂ ಓದಿ: ಲೋಕಸಭೆಯ ಸ್ಪೀಕರ್ ಆಗಿ 2 ನೇ ಬಾರಿಗೆ ಓಂ ಬಿರ್ಲಾ ಆಯ್ಕೆ
Advertisement
Advertisement
ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ನೊಳಗೆ ಸಿಬಿಐನಿಂದ ಬಂಧಿಸಲಾಯಿತು. ಇದನ್ನೂ ಓದಿ: ನಾವು ಭಾರತದ ಜೊತೆಗಿದ್ದೇವೆ: ಪಾಕಿಸ್ತಾನ ಉಪ ಪ್ರಧಾನಿ
Advertisement
Advertisement
ಕಳೆದ ವಾರ ರೋಸ್ ಅವೆನ್ಯೂ ಕೋರ್ಟ್ ದೆಹಲಿ ಸಿಎಂಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಇಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಜಾಮೀನು ನೀಡಿ ಅವೆನ್ಯೂ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.