ಬೆಂಗಳೂರು: ಡಿ.ಕೆ.ಶಿವಕುಮಾರ್ (D.K.Shivakumar) ಬಳಿಕ ಅವರ ಪುತ್ರಿ ಐಶ್ವರ್ಯಗೂ (Aishwarya DK Shivakumar) ಸಿಬಿಐ (CBI) ಶಾಕ್ ಕೊಟ್ಟಿದೆ. ಡಿಕೆಶಿ ಪತ್ರಿಗೆ ಸಿಬಿಐ ನೋಟಿಸ್ ಕೊಟ್ಟಿದ್ದು, 10 ದಿನದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಎರಡು ತಿಂಗಳ ಹಿಂದೆ ಡಿಕೆಶಿ ಒಡೆತನದ ಕಾಲೇಜಿನಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಎರಡು ತಿಂಗಳು ನಿರಂತರವಾಗಿ ದಾಖಲೆಗಳನ್ನು ಪರಿಶೀಲಿಸಿ ಬಳಿಕ ಗ್ಲೋಬಲ್ ಕಾಲೇಜಿನಲ್ಲಿ ನಿರ್ದೇಶಕಿ ಆಗಿರುವ ಐಶ್ವರ್ಯಗೆ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ದಲಿತ ನಾಯಕರ ವಿಚಾರದಲ್ಲಿ ಕಾಂಗ್ರೆಸ್ನದ್ದು ಅನುಕೂಲ ಸಿಂಧು ರಾಜಕಾರಣ; ದಲಿತರ್ಯಾರೂ ʼಕೈʼ ಪರ ಇಲ್ಲ – ಬಿಜೆಪಿ
Advertisement
Advertisement
10 ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಈ ಹಿಂದೆ ಡಿಕೆಶಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದಾಗ, ಕಾಲೇಜು ಟ್ರಸ್ಟ್ನ ಅಡಿಯಲ್ಲಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ ತನಿಖೆ ನಡೆಸಿ ಕಾಲೇಜಿನ ಫೀಸ್, ಕಾಲೇಜಿನ ಆಯವ್ಯಯ ಪಟ್ಟಿಯ ಸಮೇತ ವಿಚಾರಣೆಗೆ ಹಾಜರಾಗಲು ಐಶ್ವರ್ಯಗೆ ನೋಟಿಸ್ ನೀಡಿದೆ.
Advertisement
Advertisement
ಐಶ್ವರ್ಯ ಮಾತ್ರವಲ್ಲದೇ ಕಾಲೇಜಿನ ಎಲ್ಲಾ ನಿರ್ದೇಶಕರಿಗೆ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈ ಮೂಲಕ ಸಿಬಿಐ ತನಿಖೆ ಕೊನೆಯ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ರೌಡಿಶೀಟರ್ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಜೆಡಿಎಸ್ ಶಾಸಕ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k