ರೈಲ್ವೆ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ – ಲಾಲು ಪತ್ನಿ, ಮಾಜಿ ಸಿಎಂ Rabri Devi ನಿವಾಸದ ಮೇಲೆ ಸಿಬಿಐ ದಾಳಿ

Public TV
2 Min Read
Rabri Devi home

ಪಾಟ್ನಾ: ‘ಉದ್ಯೋಗಕ್ಕಾಗಿ ಜಮೀನು’ (Land For Jobs Case) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ (Bihar Former CM) ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ (Rabri Devi) ಅವರನ್ನು ಸಿಬಿಐ (CBI) ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ. ಸೋಮವಾರ ಪಾಟ್ನಾದಲ್ಲಿರುವ (Patna) ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಆರಂಭಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಆಪ್ ನಾಯಕ ಮನೀಶ್ ಸಿಸೋಡಿಯಾ (Manish Sisodia) ಬಂಧನದ ಬಳಿಕ ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಆರೋಪದ ಕುರಿತು ಪ್ರತಿಪಕ್ಷಗಳ ಉನ್ನತ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವನ್ನು ಬರೆದು ಒಂದು ದಿನದ ನಂತರ ಸಿಬಿಐ ತಂಡವು ರಾಬ್ರಿದೇವಿ ನಿವಾಸದ ಮೇಲೆ ದಾಳಿ ನಡೆಸಿದೆ. ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಪೊಲೀಸರ ನಡುವೆ ಗುಂಡಿನ ಚಕಮಕಿ- ಆರೋಪಿ ಅಂದರ್

Rabri Devi

ರಾಬ್ರಿದೇವಿ ನಿವಾಸದ ಮುಂದೆ ಭಾರಿ ಭದ್ರತೆಯನ್ನು ಒದಗಿಸಲಾಗಿದೆ. ಅಧಿಕಾರಿಗಳು ವಿಚಾರಣೆ ಬಳಿಕ ಸಿಬಿಐ ಕಚೇರಿಗೆ ಕರೆದೊಯ್ಯಬಹುದು ಎನ್ನಲಾಗಿದೆ. ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ರಾಜ್ಯ ಅರಣ್ಯ ಮತ್ತು ಪರಿಸರ ಸಚಿವ ತೇಜ್ ಪ್ರತಾಪ್ ಯಾದವ್ ಕೂಡ ಸಿಬಿಐ ದಾಳಿ ನಿವಾಸದಲ್ಲಿದ್ದರು ಎಂದು ಮೂಲಗಳು ಹೇಳಿವೆ.

ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ನಡುವೆ ರೈಲ್ವೆ ಸಚಿವರಾಗಿದ್ದಾಗ ಅವರ ಕುಟುಂಬಕ್ಕೆ ಉಡುಗೊರೆಯಾಗಿ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೇಯಲ್ಲಿ ನೇಮಕಾತಿ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಉಮೇಶ್ ಪಾಲ್ ಹತ್ಯೆ ಕೇಸ್ – ಮತ್ತೊಂದು ಎನ್‌ಕೌಂಟರ್‌ಗೆ ಗುಂಡು ಹಾರಿಸಿದ್ದ ವ್ಯಕ್ತಿಯೂ ಸಾವು

CBI

ಫೆಬ್ರವರಿ 27 ರಂದು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ ಮತ್ತು ಇತರ 14 ಜನರಿಗೆ ನ್ಯಾಯಾಲಯವು ಸಮನ್ಸ್ ನೀಡಿತ್ತು. ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ಆರೋಪಿಗಳಿಗೆ ಮಾ.15 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ.

ಪ್ರಸ್ತುತ ಜಾಮೀನಿನಲ್ಲಿರುವ ಒಬ್ಬರನ್ನು ಹೊರತುಪಡಿಸಿ ಆರೋಪಿಗಳಿಗೆ ಸಂಬಂಧಿಸಿದಂತೆ ಬಂಧನವಿಲ್ಲದೆ ಚಾರ್ಜ್‌ಶೀಟ್ ಸಲ್ಲಿಸಿದ ಹಿನ್ನೆಲೆ ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ಆರೋಪಿಗಳಿಗೆ ಮಾರ್ಚ್ 15 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *