ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಿಬಿಐ (CBI) ದಾಳಿ ಸರ್ವೆ ಸಾಮಾನ್ಯ, ಡಿ.ಕೆ ಶಿವಕುಮಾರ್ (DK Shivakumar) ಅವರು ಕಾನೂನಾತ್ಮಕವಾಗಿ ಹೋರಾಟ ಮಾಡ್ತಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದ್ದಾರೆ.
ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಮಾಲೀಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇತ್ತಿಚೀನ ದಿನಗಳಲ್ಲಿ ಸಿಬಿಐ ದಾಳಿ ಸರ್ವೇ ಸಾಮಾನ್ಯವಾಗಿದೆ. ವಿರೋಧ ಪಕ್ಷಗಳ ಮೇಲೆ ಸಿಬಿಐ, ಇ.ಡಿ (ED), ಐಟಿ (IT) ದಾಳಿ ಮಾಡ್ತಾ ಇರೋದು ದೇಶದಲ್ಲಿ ಹಾಗೂ ರಾಜ್ಯದಲ್ಲಿ ಜಗಜ್ಜಾಹೀರಾಗಿದೆ. ಅದರಲ್ಲಿ ಹೊಸದೇನು ಇಲ್ಲ. ಡಿ.ಕೆ ಶಿವಕುಮಾರ್ ಅವರು ಕಾನೂನಾತ್ಮಕವಾಗಿ ಹೋರಾಟ ಮಾಡ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೈದಾನ ಖಾಲಿ ಇದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ – ಪರೋಕ್ಷವಾಗಿ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ
ಇದೇ ವೇಳೆ ಪಂಚಮಸಾಲಿ ಸಮುದಾಯ ಮೀಸಲಾತಿ (Reservation) ವಿಚಾರಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿಗಳು ಮೀಸಲಾತಿ ಕೊಡ್ತೀವಿ ಅಂತಾ 4 ಸಲ ಹೇಳಿದ್ದಾರೆ. ಈಗ ಸಮಿತಿ ರಚಿಸಿ ವರದಿ ಬಂದ ಬಳಿಕ ಮೀಸಲಾತಿ ಕೊಡ್ತೀವಿ ಅಂತಾ ಹೇಳ್ತಿದ್ದಾರೆ. ಹಾಗಾದ್ರೆ ಅವರಿಗೆ ಮೀಸಲಾತಿ ಕೊಡೋಕೆ ಇಷ್ಟ ಇಲ್ವಾ? ಯಾರದಾದ್ರೂ ಒತ್ತಡ ಇದ್ಯಾ ಅನ್ನೋದು ಗೊತ್ತಿಲ್ಲ. ಒಟ್ಟಿನಲ್ಲಿ ಡಿ.22ರ ವರೆಗೂ ಸರ್ಕಾರಕ್ಕೆ ಗಡುವು ಕೊಟ್ಟಿದ್ದೇವೆ. ಆದಾದ ಬಳಿಕ ಮುಂದಿನ ನಡೆ ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.
ಡಿಕೆಶಿಗೆ ಸಿಬಿಐ ಶಾಕ್:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ಅಧಿಕಾರಿಗಳ ತಂಡ ನಿನ್ನೆ ದಾಳಿ ನಡೆಸಿತ್ತು. ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಗ್ಲೋಬಲ್ ಕಾಲೇಜಿನ ಮೇಲೆ ಸಿಬಿಐ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿತ್ತು. ಆಸ್ತಿ ಮೌಲ್ಯಮಾಪನ ಕಾರ್ಯ ನಡೆಸಿತ್ತು. ಅಲ್ಲದೇ ಕಳೆದೆರಡು ತಿಂಗಳ ಹಿಂದೆ ರಾಮನಗರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು. ಸಿಬಿಐ ಅಧಿಕಾರಿಗಳು ಈಗ ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಮೌಲ್ಯಮಾಪನ ನಡೆಸಿದ್ದಾರೆ. ಇದನ್ನೂ ಓದಿ: ಬಂಡವಾಳ ಹೂಡಿಕೆ ಸಮಾವೇಶದಿಂದ 6 ಲಕ್ಷ ಹುದ್ದೆ ಸೃಷ್ಟಿ: ಮುರುಗೇಶ್ ನಿರಾಣಿ
ಗ್ಲೋಬಲ್ ಕಾಲೇಜಿಗೆ (Global College) ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿದ್ದು, ಅವರ ಪುತ್ರಿ ಐಶ್ವರ್ಯ ಅವರು ಕಾರ್ಯದರ್ಶಿಯಾಗಿದ್ದಾರೆ. 2013 ರಿಂದ 2018ರ ವರೆಗೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಹಿನ್ನೆಲೆಯಲ್ಲಿ 2020ರ ಅಕ್ಟೋಬರ್ ತಿಂಗಳಲ್ಲೂ ಸಿಬಿಐ ದಾಳಿ ನಡೆಸಿತ್ತು. 74.92 ಕೋಟಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದ ಸಿಬಿಐ, ಡಿಕೆಶಿ ಮತ್ತು ಡಿ.ಕೆ.ಸುರೇಶ್‌ಗೆ ಸೇರಿದ್ದ 14 ಸ್ಥಳಗಳಲ್ಲಿ ದಾಳಿ ನಡೆಸಿತ್ತು.