ರಾಯ್ಪುರ್: ಮಹಾದೇವ್ ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಛತ್ತಿಸ್ಗಢದ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭೂಪೇಶ್ ಬಘೇಲ್ (Bhupesh Baghel) ಅವರ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ (CBI) ಇಂದು ಬೆಳಗ್ಗೆ ದಾಳಿ ನಡೆಸಿದೆ.
ಮೂಲಗಳ ಪ್ರಕಾರ, ಸಿಬಿಐ ಅಧಿಕಾರಿಗಳ ತಂಡ ರಾಯ್ಪುರ ಮತ್ತು ಭಿಲಾಯಿ ಎರಡೂ ಪ್ರದೇಶದಲ್ಲಿರುವ ಬಘೇಲ್ ನಿವಾಸದ ಮೇಲೆ ದಾಳಿನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮನೆ ಓನರ್ ಹೆಂಡ್ತಿ ಜೊತೆಗೇ ಕಳ್ಳಸಂಬಂಧ – ಬಾಡಿಗೆದಾರನನ್ನ 7 ಅಡಿ ಗುಂಡಿಯಲ್ಲಿ ಜೀವಂತವಾಗಿ ಹೂತುಹಾಕಿದ ಪತಿ!
ಕಳೆದ ಮಾರ್ಚ್ 10 ರಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಪೇಶ್ ಬಘೇಲ್ ನಿವಾಸ ಮತ್ತು ಅವರ ಪುತ್ರ ಚೈತನ್ಯ ಬಘೇಲ್ ಅವರ ನಿವಾಸ, ಸೇರಿ ದುರ್ಗ್ ಜಿಲ್ಲೆಯ 14 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಸರಣಿ ದಾಳಿ ನಡೆಸಿತ್ತು. ಇದನ್ನೂ ಓದಿ: Tumakuru | 19 ಸಾವಿರ ಗಡಿ ದಾಟಿದ ಕ್ವಿಂಟಲ್ ಕೊಬ್ಬರಿ ಧಾರಣೆ – ಸಾರ್ವಕಾಲಿಕ ದಾಖಲೆ
508 ಕೋಟಿ ಲಂಚ:
ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರು (Mahadev Betting App Promoters) ಭೂಪೇಶ್ ಬಘೇಲ್ ಅವರಿಗೆ ಸುಮಾರು 508 ಕೋಟಿ ರೂ. ಲಂಚ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಈ ಹಿಂದೆಯೇ ಹೇಳಿತ್ತು. ಈ ಹಿಂದೆ ದಾಳಿ ನಡೆಸಿದಾಗ 5.39 ಕೋಟಿ ರೂ. ನಗದು ವಶಪಡಿಸಿಕೊಂಡಿತ್ತು. ಜೊತೆಗೆ ದಾಳಿ ವೇಳೆ 15 ಕೋಟಿ ರೂ. ಇರುವ ಬ್ಯಾಂಕ್ ಖಾತೆಯನ್ನೂ ಜಪ್ತಿ ಮಾಡಿತ್ತು.
ಇದೀಗ ಭೂಪೇಶ್ ಬಘೇಲ್ಗೆ ಸಂಬಂಧಿಸಿದ ಎರಡು ನಿವಾಸಗಳ ಮೇಲೆ ದಾಳಿ ನಡೆಸಿರುವ ಸಿಬಿಐ ಶೋಧಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಬೆಟ್ಟಿಂಗ್ ಆ್ಯಪ್ನಿಂದ ಛತ್ತೀಸ್ಗಢ ಸಿಎಂಗೆ 508 ಕೋಟಿ ಲಂಚ