ಚೆನ್ನೈ: ಕಾಂಗ್ರೆಸ್ ಹಿರಿಯ ನಾಯಕ, ವಕೀಲ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಮನೆ ಹಾಗೂ ಕಚೇರಿಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ.
ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ, ಮುಂಬೈ, ತಮಿಳುನಾಡಿನ 7 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2010-14ರ ಅವಧಿಯಲ್ಲಿ ವಿದೇಶಿ ಹಣ ರವಾನೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಚಿದಂಬರಂ ವಿರುದ್ಧ ಹೊಸದಾಗಿ ಪ್ರಕರಣ ದಾಖಲಿಸಿದೆ. ಇದನ್ನೂ ಓದಿ: ಕನ್ನಡಿಗ ಅನಿಲ್ ಹೆಗ್ಡೆಗೆ ಬಿಹಾರ್ ರಾಜ್ಯಸಭಾ ಟಿಕೆಟ್
250 ಚೀನಾ ಪ್ರಜೆಗಳ ವೀಸಾಗೆ 50 ಲಕ್ಷ ರೂಪಾಯಿ ಲಂಚವನ್ನು ಪಡೆಯಲಾಗಿದೆ ಎಂದು ಆರೋಪಿಸಿ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿ, ತಮಿಳುನಾಡು, ಚೆನ್ನೈ ಹಾಗೂ ಶಿವಗಂಗೈನಲ್ಲಿರುವ ಚಿದಂಬರಂ ಅವರ ಮನೆ, ಕಚೇರಿಗಳ ಮೇಲೆ ಮಂಗಳವಾರ ಸಿಬಿಐ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ. ಇದನ್ನೂ ಓದಿ: ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ – ನಟ ದಿಲೀಪ್ ಸ್ನೇಹಿತ ಅರೆಸ್ಟ್