ಕೇಂದ್ರದ ಮಾಜಿ ನೌಕರನ ಮನೆ ಮೇಲೆ ಸಿಬಿಐ ದಾಳಿ – 20 ಕೋಟಿ ವಶ

Public TV
1 Min Read
CBI JPG

ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾಜಿ ನೌಕರನ ಮನೆ ಮೇಲೆ ಸಿಬಿಐ (CBI) ದಾಳಿ ನಡೆಸಿ 20 ಕೋಟಿ ರೂ. ವಶ ಪಡಿಸಿಕೊಂಡಿದೆ.

ಸಾರ್ವಜನಿಕ ವಲಯದ ನೀರು ಮತ್ತು ವಿದ್ಯುತ್ ಸಲಹಾ ಸೇವೆ (WAPCOS) ಲಿಮಿಟೆಡ್‍ನ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೇಂದರ್ ಕುಮಾರ್ ಗುಪ್ತಾ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ. ಅವರಿಗೆ ಸೇರಿದ ವಿವಿಧ ರಾಜ್ಯಗಳ 19 ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ 20 ಕೋಟಿ ರೂ. ಗೂ ಅಧಿಕ ನಗದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಗುಪ್ತಾ ಹಾಗೂ ಅವರ ಕುಟುಂಬದ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಇದಾದ ಬಳಿಕ ದಾಳಿ ನಡೆಸಿದ ಅಧಿಕಾರಿಗಳು ನಗದು ಸೇರಿದಂತೆ ಹಲವು ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ. ಮಾಜಿ ನೌಕರ ಕೇಂದ್ರ ಜಲಶಕ್ತಿ ಸಚಿವಾಲಯದ (Ministry of Jal Shakti) ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದ.

Share This Article