ಬೆಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ (Sowjanya Rape and Murder) ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್‌ನನ್ನು (Santosh Rao) ಕೋರ್ಟ್ ದೋಷಮುಕ್ತಗೊಳಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯದ (CBI Special Court) ನ್ಯಾಯಾಧೀಶ ಸಂತೋಷ್.ಸಿ.ಬಿ. ಇಂದು ತೀರ್ಪು ಪ್ರಕಟಿಸಿ, ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯನ್ನು ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ. ಆರೋಪಿ ಪರ ವಕೀಲ ಮೋಹಿತ್ ಕುಮಾರ್ ವಾದ ಮಂಡಿಸಿದ್ದರು.
Advertisement
Advertisement
ಆರೋಪಿ ಪರ ವಾದ ಏನಿತ್ತು?
ಆತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ರೇಪ್ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಇರಲಿಲ್ಲ. ಎರಡು ದಿನ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ಸೌಜನ್ಯ ಮೃತಪಟ್ಟ ದಿನ ಭಾರೀ ಮಳೆ ಇತ್ತು. ಅಂದು 500 ಜನ ಹುಡುಕಾಟ ನಡೆಸಿದ್ದರು. ಆದರೆ ಅಂದು ಶವ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ರಾಜ್ಯದಲ್ಲಿ ಫ್ರೀ ಬಸ್ ಸೇವೆ, ನಮ್ಮ ಸಂಸ್ಥೆಗಳ ಮೇಲೆ ಯಾವುದೇ ಹೊರೆಯಾಗಲ್ಲ: ರಾಮಲಿಂಗಾ ರೆಡ್ಡಿ
Advertisement
ನದಿ ದಾಟಿ ಹೋಗಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ ಪೊಲೀಸರು ಎರಡು ದಿನದ ಬಳಿಕ ಸಂತೋಷ್ ರಾವ್‌ನನ್ನು ಬಂಧಿಸಿದ್ದರು. ಅಲ್ಲಿದ್ದ ಪ್ರಕೃತಿ ಚಿಕಿತ್ಸಾಲಯದ ಸಿಸಿಟಿವಿ ಸಂಗ್ರಹಿಸಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ರಾತ್ರೋರಾತ್ರಿ ಕೆಟ್ಟ ಬೆಳಕಿನಲ್ಲಿ ಮಾಡಲಾಗಿದೆ. ಸಂತೋಷ್ ರಾವ್ ಕೊಲೆ ಮಾಡಿದ್ದಾನೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಹೇಮಂತ್ ವಾದಿಸಿದ್ದರು.
Advertisement
ಏನಿದು ಪ್ರಕರಣ?
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ಕಾಣೆಯಾಗಿದ್ದಳು ಎಂದು ತಂದೆ ಚಂದ್ರಪ್ಪ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅಕ್ಟೋಬರ್ 10ರಂದು ಅರೆನಗ್ನ ಸ್ಥಿತಿಯಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿತ್ತು.
ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಆ ಬಳಿಕ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. 2016ರಲ್ಲಿ ತನಿಖೆ ಪೂರ್ಣಗೊಳಿಸಿದ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು.