DistrictsGadagKarnatakaLatestMain Post

ಗಲಾಟೆ ವಿಕೋಪಕ್ಕೆ ಹೋದ್ರೆ ನ್ಯೂಟನ್ 3ನೇ ನಿಯಮ ಅನುಸರಿಸಬೇಕಾಗುತ್ತೆ: ಸಿ.ಸಿ.ಪಾಟೀಲ್

ಗದಗ: ಬೆಳಗಾವಿಯಲ್ಲಿ ಗಲಾಟೆ ವಿಕೋಪಕ್ಕೆ ಹೋದರೆ ಕ್ರಿಯೆಗೆ ತಕ್ಕ ಪ್ರತಿಕ್ರಿಯೆಯಾದ ನ್ಯೂಟನ್‌ನ 3ನೇ ನಿಯಮ ಅನುಸರಿಸಬೇಕಾಗುತ್ತದೆ. ಮರಾಠಿಗರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಖಡಕ್ ಎಚ್ಚರಿಕೆ ನೀಡಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಇಬ್ಬರು ಹೆಮ್ಮೆಯ ವ್ಯಕ್ತಿಗಳ ಮೂರ್ತಿಗೆ ದಕ್ಕೆಯನ್ನುಂಟು ಮಾಡಿದ ಎಂಇಎಸ್ ಪುಂಡರ ವಿರುದ್ಧ ಕಿಡಿಕಾರಿದರು.

ಪ್ರತಿವರ್ಷ ಬೆಳಗಾವಿ ಅಧಿವೇಶನ ನಡೆಯುವ ವೇಳೆ ಹಾಗೂ ಕರ್ನಾಟಕ ರಾಜ್ಯೋತ್ಸವ ವೇಳೆ ಎಂಇಎಸ್ ಅವರು ಇಂತಹ ಕಿತಾಪತಿ ಮಾಡುತ್ತಲೇ ಬರುತ್ತಿದ್ದಾರೆ. ಈ ವರ್ಷ ಅದೇ ಚಾಳಿಯನ್ನು ಮುಂದುವರೆಸಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಅದನ್ನು ಬಿಟ್ಟು ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.

ಬೆಳಗಾವಿ ಅಧಿವೇಶನ ಯಶಸ್ಸು ಕಂಡರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಎಂಇಎಸ್ ಅವರು ಈ ರೀತಿ ಮಾಡುತ್ತಿದ್ದಾರೆ. ಎಂಇಎಸ್ ಅವರು ಉದ್ದೇಶಪೂರ್ವಕವಾಗಿ ಇಂತಹ ಕೃತ್ಯಗಳನ್ನು ಮಾಡುತ್ತಿದ್ದು, ಅವರು ಅರ್ಥ ಮಾಡಿಕೊಳ್ಳಬೇಕು. ಆದರೆ ಕರ್ನಾಟಕದವರು ಶಾಂತಿ ಪ್ರಿಯರು ಅವರಂತೆ ನಾವು ಮಾಡಬಾರದು ಎಂದು ಮನವಿ ಮಾಡಿದರು.

ಎಂಇಎಸ್ ಪುಂಡರಿಗೆ ನಮ್ಮ ಸರ್ಕಾರ ಸರಿಯಾದ ಪಾಠ ಕಲಿಸುತ್ತದೆ. ಮರಾಠಿಗರು ಇನ್ನಾದರೂ ಇಂತಹ ಪುಂಡಾಟಿಕೆ ಬಿಟ್ಟು ಸಾಮರಸ್ಯದಿಂದ ಬದುಕುವುದನ್ನು ಕಲಿಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ದಾಂಧಲೆ – ರಾತ್ರಿ ಏನೇನು ಮಾಡಿದ್ದಾರೆ?

ಶಿವಸೇನಾ ಕಾರ್ಯಕರ್ತರ ಕಲ್ಲು ತೂರಾಟದ ಕುರಿತು ಪ್ರತಿಕ್ರಿಯಿಸಿದ ಅವರು, ಕರ್ನಾಟಕದ ವಾಹನಗಳು ಮಹಾರಾಷ್ಟçದಲ್ಲಿ, ಮಹಾರಾಷ್ಟ್ರದ ವಾಹನಗಳು ಕರ್ನಾಟಕದಲ್ಲಿ ಓಡಾಡುತ್ತವೆ. ಅವರು ಅಲ್ಲಿ ತೊಂದರೆ ಮಾಡಿದರೆ, ಇಲ್ಲಿಯ ಅವರ ಜನಕ್ಕೆ ತೊಂದರೆ ಆಗುತ್ತದೆ ಎಂಬ ಪ್ರಜ್ಞೆ ಅವರಿಗೆ ಇರಬೇಕು. ಆದರೆ ನಮ್ಮ ಜನರು ಆ ರೀತಿ ಮಾಡುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: MES ಪುಂಡರಿಗೆ ತಕ್ಕ ಶಾಸ್ತಿ ಆಗಲಿದೆ: ಸುನಿಲ್ ಕುಮಾರ್

ಈ ಸಂದರ್ಭದಲ್ಲಿ ಸಂಸದ ಶಿವಕುಮಾರ್ ಉದಾಸಿ, ಜಿಲ್ಲಾಧ್ಯಕ್ಷ ಮೋಹನ್ ಮಾಳಶೆಟ್ಟಿ, ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ, ಎಮ್.ಎಸ್ ಕರಿಗೌಡ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published.

Back to top button