ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್‍ನ ಎ3 ಆರೋಪಿ ಹಾಲಶ್ರೀ (Halashree) ಬಂಧನದ ವೇಳೆ ಖಾವಿ ತೊರೆದು ಬರ್ಮುಡಾ ಹಾಗೂ ಟೀ ಶರ್ಟ್ ಧರಿಸಿದ್ದರು.
ಸಿಸಿಬಿ (CCB) ಪ್ರಕರಣ ದಾಖಲಿಸಿದಾಗಿನಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು. ಅಲ್ಲದೇ ಸಿಸಿಬಿ ಕುಣಿಕೆಯಿಂದ ಜಾರಿಕೊಳ್ಳಲು ಭಾರೀ ಪ್ಲಾನ್ ಮಾಡಿದ್ದು ಬೆಳಕಿಗೆ ಬಂದಿದೆ. ಹಾಲಶ್ರೀ ಜನರಿಗೆ ತಿಳಿಯದಂತೆ ಸಾಮಾನ್ಯರ ವೇಷದಲ್ಲಿ ರೈಲಿನಲ್ಲಿ ಸಂಚರಿಸುತ್ತಿದ್ದರು. ಕಾರು ಬಳಸಿದರೆ ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುವ ಭಯದಲ್ಲಿ ಸಂಚಾರಕ್ಕೆ ರೈಲನ್ನು ಆಯ್ಕೆ ಮಾಡಿಕೊಂಡು ಕಾಶಿಗೆ ತೆರಳಲು ತಯಾರಿ ನಡೆಸಿದ್ದರು. ಇದನ್ನೂ ಓದಿ: ವೇಷ ಬದಲಿಸಿ ರೈಲಿನಲ್ಲಿ ಪ್ರಯಾಣ- ಹಾಲಶ್ರೀ ಸಿಕ್ಕಿಬಿದ್ದಿದ್ದು ಹೇಗೆ?
Advertisement
Advertisement
ಮೈಸೂರು, ಹೈದ್ರಾಬಾದ್, ಪುರಿ ಗಂಜಮ್, ಕಟಕ್ ಮಾರ್ಗವಾಗಿ ಕಾಶಿಗೆ ತೆರಳಲು ಪ್ಲಾನ್ ಆಗಿತ್ತು. ಆದರೆ ಒಡಿಶಾದ (Odisha) ಕಟಕ್‍ನಲ್ಲಿ ಸಿಸಿಬಿ ಖೆಡ್ಡಾಕ್ಕೆ ಸ್ವಾಮೀಜಿ ಬಿದ್ದಿದ್ದಾರೆ. ಒಡಿಶಾ ಪೊಲೀಸರ ಸಹಾಯದಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆಯೇ ಸಿಸಿಬಿ ಬಂಧಿಸಿದೆ. ಆರೋಪಿ ಜೊತೆಯಲ್ಲಿದ್ದ ಮತ್ತೋರ್ವ ವ್ಯಕ್ತಿಯನ್ನು ಸಹ ಅಧಿಕಾರಿಗಳು ಬಂಧಿಸಿದ್ದಾರೆ.
Advertisement
Advertisement
ಹಾಲಶ್ರೀ ಪೊಲೀಸರ ಕಣ್ಣು ತಪ್ಪಿಸಲು ಒಂದು ಕಡೆಯಿಂದ ಮತ್ತೊಂದು ಕಡೆಗೆ ರೈಲಿನಲ್ಲೇ ಪ್ರಯಾಣ ಮಾಡುತ್ತಿದ್ದರು. ಅಲ್ಲದೇ ನಾಲ್ಕು ಬೇಸಿಕ್ ಫೋನ್‍ಗಳು ಹಾಗೂ 4 ಸಿಮ್‍ಗಳ ಬಳಕೆ ಮಾಡುತ್ತಿದ್ದರು ಎಂಬ ವಿಚಾರ ಸಹ ಬೆಳಕಿಗೆ ಬಂದಿದೆ.
ಪ್ರಕರಣದ ಎ1 ಆರೋಪಿ ಚೈತ್ರಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಬರುವಾಗ ಸ್ವಾಮೀಜಿ ಅರೆಸ್ಟ್ ಆದರೆ ಎಲ್ಲಾ ದೊಡ್ಡ ದೊಡ್ಡವರ ಹೆಸರು ಹೊರ ಬರುತ್ತದೆ ಎಂದು ಹೇಳಿದ್ದಳು. ಈ ವಿಚಾರ ಈಗ ಪ್ರಕರಣದಲ್ಲಿ ಸ್ಫೋಟಕ ತಿರುವು ಪಡೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ತಲೆಮರೆಸಿಕೊಂಡಿದ್ದ ಹಾಲಶ್ರೀ ಒಡಿಸ್ಸಾದಲ್ಲಿ ಅರೆಸ್ಟ್
Web Stories