ಬೆಂಗಳೂರು: ಆಂಬಿಡೆಂಟ್ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಪಾತ್ರ ಕಂಡುಬಂದಿರುವುದಿಂದ ಅವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ರೆಡ್ಡಿ ಬಂಧನ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಆಂಬಿಡೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಗೆ ನೋಟಿಸ್ ನೀಡಲಾಗಿತ್ತು. ಹೀಗಾಗಿ ಅವರು ಶನಿವಾರ ಮಧ್ಯಾಹ್ನ ಸಿಸಿಬಿ ಕಚೇರಿಗೆ ತಮ್ಮ ವಕೀಲರೊಂದಿಗೆ ಆಗಮಿಸಿದ್ದರು. ಈ ವೇಳೆ ತನಿಖಾಧಿಕಾರಿಗಳು ಅವರನ್ನು ಸವಿಸ್ತಾರವಾಗಿ ವಿಚಾರಣೆ ನಡೆಸಿದ್ದರು. ಅಲ್ಲದೇ ತಡರಾತ್ರಿಯವರೆಗೂ ಸಹ ವಿಚಾರಣೆ ಮುಂದುವರೆದಿತ್ತು. ಪ್ರಕರಣದಲ್ಲಿ ರೆಡ್ಡಿಯವರು 20 ಕೋಟಿ ರೂಪಾಯಿಯನ್ನು ಲಪಟಾಯಿಸಲು ಒಳಸಂಚು ರೂಪಿಸಿದ್ದರ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿದ್ದೇವೆಂದು ತಿಳಿಸಿದರು.
Advertisement
Advertisement
ಬಂಧನದಲ್ಲಿರುವ ರೆಡ್ಡಿಯವರನ್ನು ಶೀಘ್ರವೇ ವೈದ್ಯಕೀಯ ತಪಾಸಣೆಗೆ ಒಳಪಡಿಸುತ್ತೇವೆ. ಇದಾದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸುತ್ತೇವೆ. ರೆಡ್ಡಿಯ ಜೊತೆ ಅವರ ಆಪ್ತ ಆಲಿಖಾನ್ ನನ್ನು ಸಹ ಬಂಧನ ಮಾಡಿದ್ದೇವೆ. ಸಂಪೂರ್ಣ ತನಿಖೆಯ ನಂತರ ಅವರಿಂದ ಹಣವನ್ನು ವಶಕ್ಕೆ ಪಡೆದುಕೊಳ್ಳುತ್ತೇವೆ. ಅಲ್ಲದೇ ಆಂಬಿಡೆಂಟ್ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದವರಿಗೆ ಅದನ್ನು ಮರಳಿಸುತ್ತೇವೆ ಎಂದು ಹೇಳಿದರು.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews