ಬೆಂಗಳೂರು: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಗೆ ಸಿಸಿಬಿ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.
ನಿತ್ಯಾನಂದ ಸ್ವಾಮೀಜಿ ಗಾಂಜಾ ಸೇವನೆ ಮಾಡಿದರೆ ಮುಕ್ತಿ ಸಿಗುತ್ತದೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೀಗಾಗಿ ಸಾರ್ವಜನಿಕರು ಸಿಸಿಬಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
Advertisement
ನಿತ್ಯಾನಂದ ಹೇಳಿದ್ದೇನು?:
ಮದ್ಯ ಸೇವನೆಯಿಂದ ಸಮಸ್ಯೆಗಳು ಉಂಟಾಗುತ್ತವೆ. ಆದರೆ ಗಾಂಜಾದಿಂದ ಯಾವುದೇ ತೊಂದರೆ ಆಗುವುದಿಲ್ಲ. ಹೊರತಾಗಿ ಜ್ಞಾನ ವೃದ್ಧಿಯಾಗಿ, ಮನಸ್ಸು ಖುಷಿಯಾಗುತ್ತದೆ. ನೀವು ಹಕ್ಕಿಯ ರೀತಿ ಹಾರಾಡಬಹುದು. ನಾನು ಗಾಂಜಾ ಸೇವನೆ ಮಾಡಿಲ್ಲ. ಆದರೆ ಮಾಹಿತಿ ಆಧಾರದ ಮೇಲೆ ಹೇಳುತ್ತಿದ್ದೇನೆ. ಗಾಂಜಾ ನಶೆ ನಿಮ್ಮೊಳಗೆ ಹೋಗುತ್ತಿದ್ದಂತೆ ಅದ್ಭುತ ಶಕ್ತಿ ಹೊರಗೆ ಬರುತ್ತದೆ. ಈ ರೀತಿಯ ಚಟಗಳಿಗೆ ಹೊಂದಿಕೊಂಡರೆ ಹಂತ ಹಂತವಾಗಿ ಬಲ ಹೆಚ್ಚುತ್ತದೆ. ನಾನು ನಿಮಗೆ ನೈಜ ಸತ್ಯವನ್ನು ಹೇಳುತ್ತಿದ್ದೇನೆ ಎಂದು ಉಪನ್ಯಾಸ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ.
Advertisement
Advertisement
ಚಂದನ್ ಶೆಟ್ಟಿ ಪ್ರಕರಣ ಏನು?
ಚಂದನ್ ಶೆಟ್ಟಿ ಸಂಗೀತ ಸಂಯೋಜನೆಯ ‘ಅಂತ್ಯ’ ಸಿನಿಮಾದ ಗಾಂಜಾ ಕಿಕ್ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿತ್ತು. ಆದರೆ ಗಾಂಜಾ ಕಿಕ್ ಹಾಡಿನಲ್ಲಿ ಮಾದಕ ವಸ್ತುಗಳನ್ನು ಸೇವಿಸುವ ಕುರಿತು ವೈಭವಿಕರಿಸಿ ತೋರಿಸಲಾಗಿದೆ. ಹೀಗಾಗಿ ಖುದ್ದು ಸ್ವಯಂ ದೂರು ದಾಖಲಿಸಿಕೊಂಡಿದ್ದ ಸಿಸಿಬಿ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಚಂದನ್ ಶೆಟ್ಟಿಗೆ ಸಮನ್ಸ್ ಜಾರಿ ಮಾಡಿದ್ದರು.
Advertisement
ನನ್ನದು ಯಾವುದೇ ತಪ್ಪಿಲ್ಲ. ಅಂತ್ಯ ಚಿತ್ರಕ್ಕಾಗಿ ಮುತ್ತು ಎಂಬವರು ಸಾಹಿತ್ಯ ಬರೆದಿದ್ದು, ಕೇವಲ 5 ಸಾವಿರ ರೂ. ಸಂಭಾವನೆಗಾಗಿ ನಾನು ನನ್ನ ಜವಾಬ್ದಾರಿ ಮರೆತು ಸಂಗೀತ ಸಂಯೋಜನೆ ಮಾಡಿ ಹಾಡಿರುವುದಾಗಿ ಸಿಸಿಬಿ ಪೊಲೀಸರಿಗೆ ಸ್ಪಷ್ಟನೆ ನೀಡಿ, ಚಂದನ್ ಶೆಟ್ಟಿ ಪ್ರಕರಣದಿಂದ ಪಾರಾಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews