ಮಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.
ಆರೋಪಿಗಳು ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 164 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ರಸ್ತೆಬದಿ ಕಸ ಎಸೆದ ವೀಡಿಯೋ ವೈರಲ್ – ಗುಂಡು ಹಾರಿಸಿಕೊಂಡು ಗೋವಾದ ವಿದ್ಯಾರ್ಥಿ ಆತ್ಮಹತ್ಯೆ
6.40 ಲಕ್ಷ ರೂ. ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೊಯಿಗೆ ಬಜಾರ್‌ನಲ್ಲಿ ಪ್ರಣಾಮ್ ಕೋಟ್ಯಾನ್ (30) ಬಂಧಿಸಿದ್ದು, ಆತನಿಂದ 104 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಪ್ರಣಾಮ್ ಕೋಟ್ಯಾನ್ ವಿರುದ್ಧ ಈ ಹಿಂದೆ ಬೆದರಿಕೆ, ಗಾಂಜಾ ಸೇವನೆ ಹಾಗೂ ಮಾರಾಟ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು.
ಪದವಿನಂಗಡಿಯಲ್ಲಿ ಧನರಾಜ್ ಪೂಜಾರಿ ಅಲಿಯಾಸ್ ಧನು ವಳಚ್ಚಿಲ್ (33) ಬಂಧಿಸಲಾಗಿದ್ದು, ಆತನಿಂದ 60 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಧನರಾಜ್ ಪೂಜಾರಿ ವಿರುದ್ಧ ಕೊಲೆ, ಕೊಲೆ ಯತ್ನ, ಹಲ್ಲೆ, ಬೆದರಿಕೆ ಸೇರಿ 12ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
2016ರ ಗಂಭೀರ ಹಲ್ಲೆ ಪ್ರಕರಣದಲ್ಲಿ ಧನರಾಜ್‌ಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಎರಡೂ ಪ್ರಕರಣಗಳಲ್ಲಿ ಅರೋಪಿಗಳಿಂದ ಮೊಬೈಲ್ ಫೋನ್, ಜಿಪ್‌ಲಾಕ್ ಕವರ್‌ಗಳು ಹಾಗೂ ಡಿಜಿಟಲ್ ತೂಕಮಾಪನ ಯಂತ್ರಗಳು ವಶಪಡಿಸಿಕೊಳ್ಳಲಾಗಿದೆ. ಡ್ರಗ್ ಜಾಲದಲ್ಲಿ ಇನ್ನಷ್ಟು ಆರೋಪಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳ ಪತ್ತೆಗೆ ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇದನ್ನೂ ಓದಿ: Shivamogga | ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೇ ಹೊತ್ತಿ ಉರಿದ ಬಸ್ – 17 ಮಂದಿ ಪ್ರಯಾಣಿಕರು ಸೇಫ್
