Bengaluru City
ಲೋಕಸಮರದ ಹೊತ್ತಲ್ಲೇ 8 ಮಂದಿ ಸಿಸಿಬಿ ವಶಕ್ಕೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಲ್ಲಿಯೇ ಸಿಲಿಕಾನ್ ಸಿಟಿಯಲ್ಲಿ 8 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿರುವ ಡಿಸಿಪಿ ಗಿರೀಶ್, 8 ಮಂದಿಯನ್ನು ವಶಕ್ಕೆ ಪಡೆದಿರುವುದು ನಿಜ. ಆದ್ರೆ ಇವರು ಶಂಕಿತ ಉಗ್ರರಲ್ಲ. ಈ ಸಂಬಂಧ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
ಶಕೀಲ್ ಮತ್ತು ಇಮ್ರಾನ್ ಸೇರಿದಂತೆ ಎಂಟು ಮಂದಿಯನ್ನು ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಅವರಿಂದ ಹತ್ತಕ್ಕೂ ಹೆಚ್ಚು ರಿವಾಲ್ವಾರ್ ಗಳನ್ನು ವಶಪಡಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಶಕ್ಕೆ ಪಡೆದವರಲ್ಲಿ ಮುಂಬೈ ಮೂಲದ ಇಬ್ಬರಿದ್ದು, ಸದ್ಯಕ್ಕೆ ಸಿಸಿಬಿ ಪೊಲೀಸರು ವಶಕ್ಕೆ ಪಡೆದ 8 ಮಂದಿಯನ್ನು ವಿಚಾರಣೆ ಮಾಡುತ್ತಿದ್ದಾರೆ.
