-ಅಲೋಕ್ ಕುಮಾರ್ ಆಗಮನ, ಮೈಕೊಡವಿ ನಿಂತಿ ಪೊಲೀಸರು
ಬೆಂಗಳೂರು: ಅಲೋಕ್ ಕುಮಾರ್ ಅವರು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ಸಿಲಿಕಾನ್ ಸಿಟಿಗೆ ಬಂದಿದ್ದೇ ತಡ ಸಿಸಿಬಿ ಪೊಲೀಸರು ಮೈಕೊಡವಿ ನಿಂತಿದ್ದಾರೆ.
ಶನಿವಾರ ರಾತ್ರಿ ಇಸ್ಪೀಟ್ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ವಿಲ್ಸನ್ ಗಾರ್ಡನ್ ಕ್ಲಬ್ ಸೇರಿ ಒಟ್ಟು 20 ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ. ವಿಲ್ಸನ್ ಗಾರ್ಡನ್ ಕ್ಲಬ್‍ವೊಂದರಲ್ಲಿ 44 ಜನರನ್ನು ವಶಕ್ಕೆ ಪಡೆದಿದ್ದು, ಒಟ್ಟು 18 ಲಕ್ಷ 92 ಸಾವಿರ ನಗದು ಹಾಗೂ ಇಸ್ಪೀಟ್ ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ತಡರಾತ್ರಿ ಪಬ್, ಬಾರ್&ರೆಸ್ಟೋರೆಂಟ್ ಗಳ ಮೇಲೆ ಸಿಸಿಬಿ ದಾಳಿ- ಮಾಲೀಕರಿಗೆ ನೋಟಿಸ್
Advertisement
Advertisement
ಶುಕ್ರವಾರ ಕೂಡ ಸಿಸಿಬಿ ಪೊಲೀಸರು ಅನಧಿಕೃತ ಪಬ್ ಮತ್ತು ಬಾರ್ ಆಂಡ್ ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದರು. ನಗರದ ಮೆಜೆಸ್ಟಿಕ್, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಇಂದಿರಾನಗರದಲ್ಲಿ ದಾಳಿ ನಡೆಸಲಾಗಿತ್ತು. ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಸಿಸಿಬಿ ಡಿಸಿಪಿ ಗಿರೀಶ್ ನೇತೃತ್ವದಲ್ಲಿ ಒಟ್ಟು 100ಕ್ಕೂ ಹೆಚ್ಚು ಸಿಸಿಬಿ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿದ್ದರು. ಇದನ್ನೂ ಓದಿ: ಅಲೋಕ್ ಕುಮಾರ್ ಖದರ್‌ಗೆ ಬೆಂಗಳೂರು ಮಹಿಳೆಯರು ಫಿದಾ!
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv