ರೌಡಿ ಲಕ್ಷ್ಮಣ ಕೊಲೆ ಪ್ರಕರಣ- ಮೊತ್ತೊಬ್ಬ ರೌಡಿ ಕಾಲಿಗೆ ಗುಂಡು

Public TV
1 Min Read
SHOOTOUT

ಬೆಂಗಳೂರು: ನಗರದ ಕುಖ್ಯಾತ ರೌಡಿ ಲಕ್ಷ್ಮಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ರೌಡಿ ಶೀಟರ್ ಕಾಲಿಗೆ ಗುಂಡು ಹೊಡೆದಿದ್ದಾರೆ.

ಸಿಸಿಬಿ ಇನ್ಸ್ ಪೆಕ್ಟರ್ ಎಂ.ಆರ್ ಹರೀಶ್ ಹೇಮಿ ಅಲಿಯಾಸ್ ಮರಾಠಿ ಹೇಮಿ ಕಾಲಿಗೆ ಗುಂಡಿಕ್ಕಿದ್ದಾರೆ. ಲಕ್ಷ್ಮಣನನ್ನ ಕೊಲೆ ಮಾಡಿ ಹೇಮಿ ತಲೆಮರೆಸಿಕೊಂಡಿದ್ದನು. ಇಂದು ಬೆಳಗ್ಗೆ ನಾಗರಬಾವಿಯ ಹನುಮಗಿರಿ ದೇವಸ್ಥಾನದ ಬಳಿ ಆರೋಪಿ ಪತ್ತೆಯಾಗಿದ್ದನು. ಇದನ್ನೂ ಓದಿ: ರೌಡಿ ಲಕ್ಷ್ಮಣನ ಕೊಲೆಗೂ ಮುನ್ನ ಗೋರಿ ಬಳಿ ನಡೆದಿತ್ತು ಮಹಾಪೂಜೆ!

Rowdy sheeter lakshmana 3 1

ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಬಂಧಿಸಲು ಹೋಗಿದ್ದಾಗ ಆರೋಪಿ ಹೇಮಿ ಅವರ ಮೇಲೆಯೇ ಹಲ್ಲೆಗೆ ಮುಂದಾಗಿದ್ದನು. ಆಗ ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ಎಂ.ಆರ್ ಹರೀಶ್ ಅವರು ಹೇಮಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ.

ಇತ್ತೀಚೆಗೆಷ್ಟೆ ರೌಡಿ ಲಕ್ಷ್ಮಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಟ್ ರಾಜನ ಕಾಲಿಗೆ ಗುಂಡಿಟ್ಟ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದರು. ಇನ್ನುಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ಅಲ್ಲದೇ ಈ ಕೊಲೆಯನ್ನು ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *