ಬೆಂಗಳೂರು: ಶಂಕಿತ ಉಗ್ರರ ಮಾಸ್ಟರ್ ಮೈಂಡ್ ಜುನೈದ್‍ನನ್ನು ಪತ್ತೆಹಚ್ಚಲು ಇಂಟರ್‌ಪೋಲ್ ಮೂಲಕ ಲುಕ್ ಔಟ್ ನೋಟಿಸ್‍ಗೆ (Look Out Circular) ಸಿಸಿಬಿ ಪೊಲೀಸರು (CCB Police) ತಯಾರಿ ನಡೆಸಿದ್ದಾರೆ. ಆರೋಪಿ ವಿದೇಶಕ್ಕೆ ತೆರಳಿರುವ ಶಂಕೆ ಇದ್ದು ಆತನನ್ನು ಬಂಧಿಸಲು ಸೂಕ್ತ ಕ್ರಮಕ್ಕೆ ಪೊಲೀಸರು ಈಗ ಮುಂದಾಗಿದ್ದಾರೆ.
ಅಪರಾಧ ಕ್ರತ್ಯಗಳಲ್ಲಿ ತೊಡಗಿಕೊಂಡಿದ್ದ ಜುನೈದ್ ಕಳೆದ ಎರಡು ವರ್ಷಗಳ ಹಿಂದೆ ಜೈಲಿನಿಂದ ಹೊರಬಂದಿದ್ದ. ಬಳಿಕ ಜೈಲಿನಿಂದ ಹೊರ ಬಂದು ದುಬೈಗೆ ತೆರಳಿರುವ ಅನುಮಾನ ವ್ಯಕ್ತವಾಗಿದೆ. 2021ರಲ್ಲಿ ದುಬೈಗೆ ಪ್ರಯಾಣ ಮಾಡಿರುವ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ದಳಕ್ಕೆ (NIA) ಮಾಹಿತಿ ನೀಡಿರುವ ಸಿಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ ಶೀಘ್ರ ಲುಕ್ ಔಟ್ ನೋಟಿಸ್ ಜಾರಿಗೊಳಿಸಲು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಸ್ಫೋಟಕ್ಕೆ ಸಂಚು – ಐವರು ಶಂಕಿತ ಉಗ್ರರು ಅರೆಸ್ಟ್
Advertisement
Advertisement
ಸಿಸಿಬಿ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಶಂಕಿತ ಉಗ್ರರಿಗೆ ಜುನೈದ್ ಹಣ ಸಹಾಯ ಮಾಡುತ್ತಿದ್ದ. ಅಲ್ಲದೇ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಮಾಹಿತಿ ಇದೆ. ಇದೀಗ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದರೂ ಆತನನ್ನು ಬಂಧಿಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ಪೊಲೀಸರು ಮಾಡಿಕೊಂಡಿದ್ದಾರೆ. ಇದರಿಂದಾಗಿ ಪ್ರಮುಖ ಆರೋಪಿ ಶೀಘ್ರದಲ್ಲೇ ಪೊಲೀಸರ ಬಲೆಗೆ ಬೀಳುವ ಸಾಧ್ಯತೆ ಇದೆ.
Advertisement
Advertisement
ಜುಲೈ 19 ರಂದು ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಶಂಕಿತರಿಂದ ಅಪಾರ ಪ್ರಮಾಣದ ಸ್ಫೋಟಕ ಸಾಮಾಗ್ರಿ ಹಾಗೂ ಪಿಸ್ತೂಲ್‍ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬೆಂಗಳೂರು ಸೇರಿದಂತೆ ಹಲವೆಡೆ ಆರೋಪಿಗಳು ಸ್ಫೋಟಕ್ಕೆ ಸಂಚು ರೂಪಿಸಿದ್ದರು ಎಂಬುದು ತನಿಖೆ ವೇಲೆ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: 2 ದಿನದೊಳಗೆ ದೊಡ್ಡ ಮಟ್ಟದ ಸ್ಪೋಟಕ್ಕೆ ನಡೆದಿತ್ತು ಸಿದ್ಧತೆ!
Web Stories