ಬೆಂಗಳೂರು: ಕೇಂದ್ರಿಯ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬೆಂಗಳೂರು ಟರ್ಫ್ ಕ್ಲಬ್ ಮೇಲೆ ದಾಳಿ ನಡೆಸಿ, 5.61 ಲಕ್ಷ ರೂಪಾಯಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಿಸಿಬಿ ಎಸಿಪಿ ಪಿ.ಟಿ.ಸುಬ್ರಮಣ್ಯ ನೇತೃತ್ವದ ತಂಡ ಟರ್ಫ್ ಕ್ಲಬ್ ಮೇಲೆ ದಾಳಿ ನಡೆಸಿತ್ತು. ದಾಳಿ ವೇಳೆ ಗ್ಯಾಬ್ಲಿಂಗ್ ನಡೆಸುತ್ತಿದ್ದ ಬುಕ್ಕಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 5 ಲಕ್ಷ 61 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳು ರೇಸ್ ಆಡಲು ಬರುತ್ತಿದ್ದವರ ಬಳಿ ಗ್ಯಾಂಬ್ಲಿಂಗ್ ನಡೆಸುತ್ತಿದ್ದರು.
Advertisement
Advertisement
ಈ ಹಿಂದೆಯೂ ಬೆಂಗಳೂರು ಟರ್ಫ್ ಕ್ಲಬ್ ಮೇಲೆ ಸಿಐಡಿ ಪೊಲೀಸರು ದಾಳಿ ನಡೆಸಿದ್ದರು. ಅಲ್ಲದೇ ಕ್ವೀನ್ ಲತೀಫಾ ಎನ್ನುವ ಕುದುರೆಗೆ ಉದ್ದೀಪನ ಮದ್ದು ನೀಡಿದ್ದಾರೆಂದು ಹೈ-ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಾಗಿತ್ತು.
Advertisement
ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಅಧಿಕೃತ ಟಿಕೆಟ್ ಗಿಂತ ಕಡಿಮೆ ಮೊತ್ತಕ್ಕೆ ಬುಕ್ಕಿಗಳು ಟಿಕೆಟ್ ನೀಡುತ್ತಿದ್ದರು. ಈ ಮೂಲಕ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆಯನ್ನು ವಂಚನೆ ಮಾಡುತ್ತಿದ್ದರು. ಕೃತ್ಯದಲ್ಲಿ ಟರ್ಫ್ ಕ್ಲಬ್ ಸಿಬ್ಬಂದಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ರೇಸ್ ಆಡಲು ಬರುತ್ತಿದ್ದ ಗ್ರಾಹಕರನ್ನು ಸೆಳೆದು, ಕೌಂಟರ್ ಬೆಲೆಗಿಂತಲೂ ಕಡಿಮೆ ಬೆಲೆಗೆ ಟಿಕೆಟ್ ನೀಡಿ ಬುಕ್ಕಿಗಳು ಜೂಜಾಟ ಆಡಿಸುತ್ತಿದ್ದರು. ಘಟನೆ ಸಂಬಂಧ ಹೈ-ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv