– ವಿಲ್ಸನ್‌ಗಾರ್ಡನ್ ನಾಗನದ್ದು ಸೇರಿದಂತೆ 18 ಮೊಬೈಲ್ ಸೀಜ್
– ಡಿಸಿಪಿ ಸ.ರಾ ಫಾತಿಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ
ಬೆಂಗಳೂರು: ದರ್ಶನ್ (Actor Darshan) ರಾಜಾತಿಥ್ಯ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿಗೆ (Parappana Agrahara Jail) ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಮೊಬೈಲ್ ಸೇರಿದಂತೆ ಮಾದಕ ವಸ್ತು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದ ದರ್ಶನ್ ಹಾಗೂ ವಿಲ್ಸನ್‌ಗಾರ್ಡನ್ ನಾಗನ ಫೋಟೋ ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಪೊಲೀಸರು ಹದ್ದಿನ ಕಣ್ಣಿದ್ದರು. ಜೊತೆಗೆ ಜೈಲಾಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಆದರೆ ಇದೀಗ ಏಕಾಏಕಿ ದಾಳಿ ನಡೆಸಿದ್ದಾರೆ.ಇದನ್ನೂ ಓದಿ: Breaking – ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್!
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಆಗ್ನೇಯ ಪೊಲೀಸರಿಂದ ದಾಳಿ ನಡೆದಿದ್ದು, ರಾತ್ರಿ ಏಕಾಏಕಿ ಡಿಸಿಪಿ ಸರಾ ಫಾತಿಮಾ (DCP Sarah Fathima) ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ ನಡೆಸಲಾಗಿದೆ. ಜೈಲಿನಲ್ಲಿ ಮೊಬೈಲ್ ಬಳಕೆಗೆ ಬಲವಾದ ಪುರಾವೆಗಳು ಲಭ್ಯವಾಗಿದ್ದು, ಜೈಲಾಧಿಕಾರಿಗಳ ಕಳ್ಳಾಟ ಮುಂದುವರೆದಿರುವುದು ದಾಳಿ ವೇಳೆ ಸಾಬೀತಾಗಿದೆ.
ಕುಖ್ಯಾತ ರೌಡಿ ವಿಲ್ಸನ್‌ಗಾರ್ಡನ್ ನಾಗನ (Wilson Garden Naga) ಬ್ಯಾರಕ್ ಅಕ್ಕಪಕ್ಕದಲ್ಲಿ ಮೊಬೈಲ್‌ಗಳು ಪತ್ತೆಯಾಗಿದ್ದು, ಸುಮಾರು 17 ಆಂಡ್ರಾಯ್ಡ್ ಫೋನ್‌ಗಳು ಸಿಕ್ಕಿವೆ. ವಿಲ್ಸನ್ ಗಾರ್ಡನ್ ನಾಗನ ಮೊಬೈಲ್ ಸೇರಿದಂತೆ ಸಹಚರರ ಸುಮಾರು 18 ಮೊಬೈಲ್ ಸೀಜ್ ಮಾಡಿದ್ದಾರೆ. ಜೊತೆಗೆ ಮಾದಕ ವಸ್ತು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ. ಇದನ್ನು ಕಂಡು ಖುದ್ದು ಪೊಲೀಸರೇ ಶಾಕ್ ಆಗಿದ್ದಾರೆ. ಇಷ್ಟೆಲ್ಲಾ ಇದ್ದರೂ ವಿಲ್ಸನ್‌ಗಾರ್ಡನ್ ನಾಗನನ್ನು ಬೇರೆ ಕಡೆ ಏಕೆ ವರ್ಗಾವಣೆ ಮಾಡಲಿಲ್ಲ. ಅವನ ಹಿಂದೆ ಯಾರಿದ್ದಾರೆ? ಅವನಿಗೆ ಇಲಾಖೆಯಲ್ಲಿ ಇಷ್ಟೊಂದು ಪ್ರಭಾವವಿದೇಯಾ? ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.ಇದನ್ನೂ ಓದಿ: ಶಾಸಕ ಮುನಿರತ್ನ ಬಂಧನ ಪ್ರಕರಣ – ತಪ್ಪು ಮಾಡಿರೋದು ಸಾಮಾನ್ಯ ವ್ಯಕ್ತಿಯಲ್ಲ ಒಬ್ಬ ಮಾಜಿ ಮಂತ್ರಿ: ಡಿಕೆ ಸುರೇಶ್