ಪಾಕ್ ಧ್ವಜ, ಸರಕುಗಳ ಮಾರಾಟ ನಿಲ್ಲಿಸುವಂತೆ ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ವಾರ್ನಿಂಗ್

Public TV
2 Min Read
E Commerce platforms

ನವದೆಹಲಿ: ಪಾಕಿಸ್ತಾನ ಧ್ವಜ (Pakistan Flag) ಹಾಗೂ ಸರಕುಗಳ ಮಾರಾಟವನ್ನು ತಕ್ಷಣದಿಂದ ನಿಲ್ಲಿಸುವಂತೆ ಅಮೆಜಾನ್ ಇಂಡಿಯಾ, ಫ್ಲಿಪ್‌ಕಾರ್ಟ್ ಸೇರಿದಂತೆ ಪ್ರಮುಖ ಇ-ಕಾಮರ್ಸ್ ಕಂಪನಿಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (The Central Consumer Authority) ಎಚ್ಚರಿಕೆ ನೀಡಿದೆ.

ಈ ಕುರಿತು ಕೇಂದ್ರ ಗ್ರಾಹಕ ವ್ಯವಹಾರ ಮತ್ತು ಆಹಾರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಮಾತನಾಡಿ, ಪಾಕಿಸ್ತಾನ ಧ್ವಜ ಹಾಗೂ ಸರಕುಗಳ ಮಾರಾಟವನ್ನು ತಕ್ಷಣದಿಂದ ನಿಲ್ಲಿಸಬೇಕು ಹಾಗೂ ಯಾವುದೇ ಸರಕುಗಳಿದ್ದರೂ ಅವುಗಳನ್ನು ಪಟ್ಟಿಯಿಂದ ತೆಗೆದು ಹಾಕಬೇಕು. ಈ ಸಂಬಂಧ ರಾಷ್ಟ್ರೀಯ ಕಾನೂನು ಪಾಲಿಸಬೇಕು ಎಂದು ತಿಳಿಸಿದರು.ಇದನ್ನೂ ಓದಿ: ಭಾರತದ ದಾಳಿ ನಂತ್ರ ಪಾಕ್‌ನಲ್ಲಿ ಪರಮಾಣು ವಿಕಿರಣ ಸೋರಿಕೆ ಆಗ್ತಿದ್ಯಾ? ಮತ್ತೆ ಜಗತ್ತಿನ ಮುಂದೆ ಬೆತ್ತಲಾದ ಪಾಕ್‌

ಇದಕ್ಕೂ ಮೊದಲು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟವು ಪತ್ರದ ಮೂಲಕ, ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಪಾಕಿಸ್ತಾನಿ ಧ್ವಜಗಳು ಮತ್ತು ಇತರ ಸರಕುಗಳ ಮಾರಾಟವನ್ನು ನಿಷೇಧಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಪ್ರಹ್ಲಾದ್ ಜೋಶಿ ಅವರನ್ನು ಒತ್ತಾಯಿಸಿತ್ತು.

ಪತ್ರದಲ್ಲಿ `ಆಪರೇಷನ್ ಸಿಂಧೂರ’ದ ಬಳಿಕ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಪಾಕಿಸ್ತಾನಿ ಧ್ವಜಗಳು ಮತ್ತು ಇತರ ಸರಕುಗಳ ಮಾರಾಟ ಮಾಡುವುದು ಕಂಡುಬರುತ್ತಿದೆ. ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ನಂತಹ ಪ್ರಮುಖ ಇ-ಕಾಮರ್ಸ್ ವೇದಿಕೆಗಳಲ್ಲಿ ಪಾಕಿಸ್ತಾನಿ ಧ್ವಜಗಳು, ಲೋಗೋ ಹೊಂದಿರುವ ಮಗ್‌ಗಳು ಮತ್ತು ಟಿ-ಶರ್ಟ್‌ಗಳನ್ನು ಬಹಿರಂಗವಾಗಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಉಲ್ಲೇಖಿಸಿದ್ದರು.

ರಾಷ್ಟ್ರಕ್ಕಾಗಿ ನಮ್ಮ ಸೈನಿಕರು ಪ್ರಾಣತ್ಯಾಗ ಮಾಡುತ್ತಿದ್ದು, ಈ ಪರಿಸ್ಥಿತಿಯಲ್ಲಿ ನಮ್ಮ ವಿರೋಧಿ  ರಾಷ್ಟ್ರವನ್ನು ಪ್ರತಿನಿಧಿಸುವ ವಸ್ತುಗಳ ಮಾರಾಟ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಇದು ದೇಶದಲ್ಲಿರುವ ಪ್ರತಿಯೊಬ್ಬ ನಾಗರಿಕನ ಭಾವನೆಗೆ ವಿರುದ್ಧವಾಗಿದೆ. ಈ ಎಚ್ಚರಿಕೆಯನ್ನು ಪಾಲಿಸಲು ಕಂಪನಿಗಳು ವಿಫಲವಾದಲ್ಲಿ ದಂಡ ವಿಧಿಸಬೇಕು ಹಾಗೂ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ಗಳನ್ನು ಬ್ಯಾನ್ ಮಾಡಬೇಕು ಎಂದು ಬರೆದಿದ್ದಾರೆ.ಇದನ್ನೂ ಓದಿ: ಪಾಕ್‌ನ 14 ಸೈನಿಕರ ಹತ್ಯೆ – ಪೂರ್ತಿ ವೀಡಿಯೋ ರಿಲೀಸ್‌ ಮಾಡಿದ ಬಲೂಚಿಸ್ತಾನ

Share This Article