ಮೈಸೂರು: ಕೆಎಸ್‍ಆರ್‍ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ.
35 ವರ್ಷದ ಮಂಜುನಾಥ್ ಮೃತ ಬೈಕ್ ಸವಾರ. ಘಟನೆಯಲ್ಲಿ ಹಿಂಬದಿ ಸವಾರ ರವಿಕುಮಾರ್ ಗೆ ಗಂಭೀರ ಗಾಯವಾಗಿದೆ. ಮಂಜುನಾಥ್ ಹಾಗೂ ರವಿಕುಮಾರ್ ಇಬ್ಬರೂ ಮಾಗಳಿ ಗ್ರಾಮದವರು ಎಂದು ತಿಳಿದುಬಂದಿದೆ.
ಮಂಗಳವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಸಿಸಿ ಕ್ಯಾಮೆರಾದಲ್ಲಿ ಅಪಘಾತದ ಭಯಾನಕ ದೃಶ್ಯ ಸೆರೆಯಾಗಿದೆ. ಘಟನೆ ಬಗ್ಗೆ ಹುಣಸೂರು ಪಟ್ಟಣ ಪೊ ಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://www.youtube.com/watch?v=lK_lSC2m5Is&feature=youtu.be