Districts

ಮಂಡ್ಯ: ರಸ್ತೆ ಬದಿ ನಿಂತಿದ್ದ ಕಾರಿಗೆ ಹಿಂದಿನಿಂದ ಬಂದ ಕಾರ್ ಡಿಕ್ಕಿ – ಮೈ ಜುಮ್ಮೆನಿಸೋ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Published

on

Share this

ಮಂಡ್ಯ: ರಸ್ತೆ ಬದಿ ನಿಂತಿದ್ದ ಕಾರಿಗೆ ಹಿಂದಿನಿಂದ ಬಂದ ಕಾರೊಂದು ಸಿನಿಮೀಯ ರೀತಿಯಲ್ಲಿ ಡಿಕ್ಕಿ ಹೊಡೆದು, ಸುಮಾರು 15 ಅಡಿಯಷ್ಟು ದೂರ ಕಾರನ್ನು ತಳ್ಳಿಕೊಂಡು ಹೋದ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೆ  3ರಂದು ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಮದ್ದೂರಿನ ಗಿರಿ ಟೈರ್ ನ ಮಾಲೀಕ ಗಿರೀಶ್ ಎಂಬವರು ತಮ್ಮ ಕಾರನ್ನು ರಸ್ತೆ ಬದಿ ನಿಲ್ಲಿಸಿ ಬ್ಯಾಂಕ್ ಚಲನ್ ತರಲು ಅಂಗಡಿಯೊಳಗೆ ಹೋಗಿದ್ದಾರೆ. ಈ ವೇಳೆ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ಗಿರೀಶ್ ಅವರ ಕಾರಿಗೆ ಡಿಕ್ಕಿ ಹೊಡೆದು ಸುಮಾರು ಹದಿನೈದು ಅಡಿಯಷ್ಟು ಮುಂದೆ ಕಾರನ್ನು ತಳ್ಳಿಕೊಂಡು ಹೋಗಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನಿಂತಿದೆ. ಅದೃಷ್ಟವಶಾತ್ ಆ ಸಮಯದಲ್ಲಿ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚಾರ ಮಾಡದ ಹಿನ್ನೆಲೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ.

ಈ ಎಲ್ಲಾ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿಂತಿದ್ದ ಕಾರಿಗೆ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆಯುವ ದೃಶ್ಯವಂತು ಮೈ ಜುಮ್ಮೆನ್ನುವಂತಿದೆ. ಇನ್ನು ಡಿಕ್ಕಿ ಹೊಡೆದ ಕಾರು ಬೆಂಗಳೂರು ಮೂಲದ ಸೈಯದ್ ಎಂಬುವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಜೊತೆಗೆ ಈ ಕಾರಿನಲ್ಲಿ ಚಾಲಕ ಸೇರಿದಂತೆ ನಾಲ್ವರು ಪ್ರಯಾಣ ಮಾಡುತ್ತಿದ್ದರು. ಇವ್ರಿಗೆಲ್ಲ ಸಣ್ಣ ಪುಟ್ಟ ಗಾಯಾಗಳಾಗಿವೆ. ಘಟನೆಯಲ್ಲಿ ಗಿರೀಶ್ ಅವರ ಕಾರು ಸಂಪೂರ್ಣವಾಗಿ ಜಖಂ ಆಗಿದೆ.

ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.youtube.com/watch?v=QP1AiTmh3DM

Click to comment

Leave a Reply

Your email address will not be published. Required fields are marked *

Advertisement
Advertisement