ಡೆಹ್ರಾಡೂನ್: ಟೀಂ ಇಂಡಿಯಾ (Team India) ಸ್ಟಾರ್ ಆಟಗಾರ ರಿಷಭ್ ಪಂತ್ (Rishabh Pant) ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಪಂತ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತನ್ನ ತಾಯಿಯೊಂದಿಗೆ ಹೊಸವರ್ಷ ಆಚರಿಸಲು ತೆರಳುತ್ತಿದ್ದ ವೇಳೆಯೇ ದುರಂತ ಸಂಭವಿಸಿದೆ.
Rishabh Pant car accident: Cricketer dozed off while driving, says Haridwar Police
Read @ANI Story | https://t.co/LmxLnqCS69#RishabhPant #RishabhPantaccident #IndianCricketTeam #RishabhPantHospitalised pic.twitter.com/uh0525chIn
— ANI Digital (@ani_digital) December 30, 2022
Advertisement
ಅತೀ ವೇಗವೇ ಅಪಘಾತಕ್ಕೆ ಕಾರಣ: ಉತ್ತರಾಖಂಡದಿಂದ (Uttarakhand) ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ (Car Accident) ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ ರಾಕೆಟ್ ವೇಗದಲ್ಲಿ ಕಾರು ಚಲಿಸುತ್ತಿದ್ದದ್ದೇ ರಿಷಭ್ ಪಂತ್‌ಗೆ ಮುಳುವಾಯ್ತು ಎಂದು ಹೇಳಲಾಗ್ತಿದೆ. ಅಪಘಾತದ ಸಂದರ್ಭದಲ್ಲಿ ರಿಷಭ್ ಚಲಿಸುತ್ತಿದ್ದ `ಮರ್ಸಿಡೀಸ್ ಎಎಂಜಿ ಜಿಎಲ್‌ಇ-43 ಕೂಪೆ’ (Mercedes-AMG GLE43 Coupe) ಕಾರು ರಾಕೆಟ್ ವೇಗದಲ್ಲಿತ್ತು ಎನ್ನಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Advertisement
Praying for Rishabh Pant. Thankfully he is out of danger. Get well soon champ.#RishabhPant pic.twitter.com/Uyn5K45W9C
— Shankar Singh (@shankarVrikshit) December 30, 2022
Advertisement
ರಿಷಭ್ ಪಂತ್ ತನ್ನ ತಾಯಿಗೆ ಸರ್ಪ್ರೈಸ್ ಕೊಡಬೇಕು, ತಾಯಿಯೊಂದಿಗೆ ಹೊಸ ವರ್ಷದ ಸಂಭ್ರಮ ಕಳೆಯಬೇಕು ಎಂದು ಮರ್ಸಿಡೀಸ್ ಎಎಂಜಿ ಜಿಎಲ್‌ಇ-43 ಕೂಪೆ (Mercedes-AMG GLE43 Coupe) ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ನಿದ್ರೆ ಮಾಡುವಂತಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಕಾರು ಅಪಘಾತಕ್ಕಿಡಾಗಿದೆ. ಬಳಿಕ ಕಾರಿನ ಕಿಟಕಿ ಗಾಜನ್ನು ಒಡೆದು ಪಂತ್ ಹೊರಗೆ ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Praying for #RishabhPant’s speedy recovery. Get well soon, champ! pic.twitter.com/CheMg36j9L
— Swati Maliwal (@SwatiJaiHind) December 30, 2022
ಸದ್ಯ ಅವರನ್ನು ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆ, ಬೆನ್ನು ಹಾಗೂ ಕಾಲಿನ ಭಾಗಕ್ಕೆ ಗಾಯಗಳಾಗಿದ್ದು, ಪ್ರಜ್ಞೆ ಕಳೆದುಕೊಂಡಿದ್ದಾರೆ. ಗಂಭೀರ ಸ್ಥಿತಿ ಎದುರಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಭೀಕರ ಕಾರು ಅಪಘಾತ- ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಸ್ಥಿತಿ ಗಂಭೀರ
ಅಭಿಮಾನಿಗಳ ಆಕ್ರಂದನ: ಕಾರು ಅಪಘಾತಕ್ಕೀಡಾಗಿರುವ ರಿಷಭ್ ಪಂತ್ ಶೀಘ್ರವೇ ಗುಣಮುಖರಾಗುವಂತೆ ಅಭಿಮಾನಿಗಳು ಅಲವತ್ತುಕೊಂಡಿದ್ದಾರೆ. ಜಾಲತಾಣದಲ್ಲಿ ಪಂತ್ ಅವರ ಭಾವಚಿತ್ರವನ್ನು ಹಂಚಿಕೊಂಡಿದ್ದು, ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಫುಟ್ಬಾಲ್ ಲೆಜೆಂಡ್ ಪೀಲೆ ಇನ್ನಿಲ್ಲ