Connect with us

Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ಯುವತಿ

Published

on

ಬೆಂಗಳೂರು: ಹೇಳಿಕೆ ನೀಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ  ಮಾಜಿ ಸಚಿವರ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ. ವಸಂತ ನಗರದ ಗುರುನಾನಕ್‌ ಭವನದಲ್ಲಿ ವಿಚಾರಣೆ ನಡೆಯುತ್ತಿದ್ದು, ಯುವತಿಯ ಹೇಳಿಕೆಯನ್ನು ಪಡೆಯುತ್ತಿದ್ದಾರೆ.

ಇಂದು ಬೆಳಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಯುವತಿ ಪರ ವಕೀಲ ಜಗದೀಶ್, ಆರೋಪಿಯನ್ನು ಎಸ್‍ಐಟಿ ಅವರು ಬಂಧಿಸಿದರೆ ಈ ಪ್ರಕರಣದ ಕುರಿತಾಗಿ ಸರಿಯಾದ ತನಿಖೆ ನಡೆಯುತ್ತದೆ. ಕೋರ್ಟ್‍ನ ವಾತಾವರಣವನ್ನು ನೋಡಿಕೊಂಡು ಯುವತಿ ಕೋರ್ಟಿಗೆ ಬರುತ್ತಾರೆ. ಯುವತಿ ರಕ್ಷಣೆ ಹೇಗೆ ಮುಖ್ಯವೋ ಹಾಗೇ ಯುವತಿಯ ಹೇಳಿಕೆಯೂ ಅಷ್ಟೇ ಮುಖ್ಯವಾಗುತ್ತದೆ. ನಮ್ಮ ಕಡೆಯಿಂದ ಎಲ್ಲಾ ರೀತಿ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ನ್ಯಾಯಾಲಯ ಹೇಗೆ ಹೇಳುತ್ತದೆ ಮತ್ತು ಯಾವ ಸಮಯವನ್ನು ಸೂಚಿಸುತ್ತದೆ ಎಂದು ನೋಡಿ ಸಂತ್ರಸ್ತೆ ಯುವತಿ ಕೋರ್ಟ್ ಮುಂದೆ ಬರುತ್ತಾರೆ ಎಂದಿದ್ದರು.

ಪೋಷಕರು ಮಾಧ್ಯಮಗಳ ಜೊತೆ ಹೇಳಿಕೆ ನೀಡಿದ ಬೆನ್ನಲ್ಲೇ ಸಿಡಿ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿ, ಪೋಷಕರ ಮೇಲೆ ಬಲವಂತವಾಗಿ ಒತ್ತಡ ಹಾಕಿ ಹೇಳಿಕೆಗಳನ್ನು ನೀಡಿಸಲಾಗುತ್ತಿದೆ. ಎಸ್‌ಐಟಿ ಪೊಲೀಸರ ತನಿಖೆಯ ಬಗ್ಗೆ ನನಗೆ ಅನುಮಾನವಿದೆ. ಹೀಗಾಗಿ ನಾನು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡುತ್ತೇನೆ ಎಂದು ಹೇಳಿ ವಿಡಿಯೋ ರಿಲೀಸ್‌ ಮಾಡಿದ್ದರು.

ಭಾನುವಾರವೇ ಮುಖ್ಯನ್ಯಾಯಾಧೀಶರಿಗೆ ಪತ್ರ ಬರೆದಿದ್ದ ಯುವತಿ, ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು. ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್‍ಐಟಿ ತನಿಖೆ ನಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇತ್ತ ಆರೋಪಿ ರಮೇಶ್ ಜಾರಕಿಹೊಳಿ ಆಡುಗೋಡಿಯಲ್ಲಿ ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

Click to comment

Leave a Reply

Your email address will not be published. Required fields are marked *