ಕಲಬುರಗಿ: ಮಹಿಳೆಯರನ್ನು ರಕ್ಷಣೆ ಮಾಡಬೇಕಾದ ಕಲಬುರಗಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ(ಸಿಡಿಪಿಒ) ಮಹಿಳಾ ಸಿಬ್ಬಂದಿಗೆ ಮಂಚಕ್ಕೆ ಕರೆದಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ನಮ್ಮ ಸಮಾಜದಲ್ಲಿ ಮಹಿಳೆಯರು ಶೋಷಣೆಗೆ ಒಳಗಾದರೆ ರಕ್ಷಣೆ ಮಾಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸ್ಥಾಪಿಸಿದೆ. ಆದರೆ ಕಲಬುರಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಯಾವುದು ಸರಿಯಿಲ್ಲ. ಏಕೆಂದರೆ ಮಹಿಳೆಯರ ಹಿತ ಕಾಯಬೇಕಾದ ಇಲ್ಲಿನ ಸಿಡಿಪಿಒ ರಾಮನ್ ಇಲ್ಲಿನ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಮನಸಿಗೆ ಬಂದಷ್ಟು ಹಣವನ್ನು ಕೇಳಿ ಹಣ ಕೊಡಲು ಆಗದಿದ್ದಲ್ಲಿ ದೈಹಿಕ ಸಂಬಂಧವನ್ನು ಹೊಂದುವಂತೆ ಒತ್ತಾಯಿಸಿದ್ದಾನೆ.
Advertisement
ಕಾಮುಕ ಅಧಿಕಾರಿ ವಿರುದ್ಧ ಜಿಲ್ಲಾ ಪಂಚಾಯತ್ ಸದಸ್ಯರು ಕ್ರಮಕ್ಕೆ ಆಗ್ರಹಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಗ ನೊಂದ ಮಹಿಳೆ ರಾಷ್ಟ್ರೀಯ ಮಾನವ ಹಕ್ಕುಗಳ ಮೊರೆ ಹೋಗಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
Advertisement
Advertisement
ದೂರಿನಲ್ಲಿ ಏನಿದೆ?
ಕಲಬುರಗಿ ಗ್ರಾಮೀಣದ ಶಿಶು ಅಭಿವೃದ್ಧಿ ಅಧಿಕಾರಿ ಸಿ.ವಿ.ರಾಮನ್ ಸುಖಾ ಸುಮ್ಮನೆ ದಬ್ಬಾಳಿಕೆಯನ್ನ ಮಾಡುತ್ತಿದ್ದಾರೆ. ಯಾವುದಾದರೂ ಕೆಲಸ ಮಾಡಿಕೊಡಲು ಹಣವನ್ನು ಕೇಳುತ್ತಾರೆ. ಹಣ ಕೊಡಲು ಆಗದೇ ಇದ್ದಲ್ಲಿ ಅವರು ತಮ್ಮ ಜೊತೆ ದೈಹಿಕ ಸಂಬಂಧವನ್ನು ಹೊಂದುವಂತೆ ಒತ್ತಾಯಿಸುತ್ತಾರೆ. ಆದರೆ ಇವರು ಹೆಣ್ಣು ಮತ್ತು ಹಣವನ್ನು ಕೊಟ್ಟರೆ ಯಾವ ಕೆಲಸ ಬೇಕಾದರೂ ಸಲಿಸಾಗಿ ಮಾಡಿಕೊಡುತ್ತಿದ್ದಾರೆ. ಹೀಗೆ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುವುದರ ಜೊತೆ ಮಹಿಳಾ ಸಿಬ್ಬಂದಿ ಜೀವನದ ಜೊತೆ ಚಲ್ಲಾಟವಾಡುತ್ತಿದ್ದಾರೆ. ಹೀಗಾಗಿ ರಾಮನ್ ಮೇಲೆ ಕೂಡಲೇ ಸೂಕ್ತ ಕ್ರಮ ಜರುಗಿಸಿ ಅಮಾಯಕ ಮಹಿಳಾ ಸಿಬ್ಬಂದಿ ಮೇಲೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
Advertisement
ಸಿ.ವಿ.ರಾಮನ್ ಮೇಲೆ ಬಂದಿರುವ ಲೈಂಗಿಕ ಆರೋಪ ಕುರಿತು ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆದಿದ್ದು, ಕೂಡಲೇ ರಾಮನ್ ನನ್ನು ಆ ಸ್ಥಾನದಿಂದ ಅಮಾನತು ಮಾಡಲು ನಿರ್ಧಾರ ಕೈಗೊಂಡರೂ ಪ್ರಯೋಜನವಾಗಿಲ್ಲ. ಹೀಗಾದರೆ ಮಹಿಳಾ ಸಿಬ್ಬಂದಿಯನ್ನು ಯಾರು ರಕ್ಷಣೆ ಮಾಡಬೇಕು ಎಂಬುದು ಜಿಲ್ಲಾ ಪಂಚಾಯತ್ ಸದಸ್ಯರ ಪ್ರಶ್ನೆಯಾಗಿದೆ.
ಸಿ.ವಿ.ರಾಮನ್ ವಿರುದ್ಧ ಇನ್ನಿತರ ಮಹಿಳಾ ಸಿಬ್ಬಂದಿಗಳು ಸಹ ಲೈಂಗಿಕ ಆರೋಪದ ಕುರಿತು ದೂರು ನೀಡಿದ್ದು, ಆ ಒಂದು ತನಿಖೆಯನ್ನು ಕಮರ್ಷಿಯಲ್ ಟ್ಯಾಕ್ಸ್ ನ ಹಿರಿಯ ಮಹಿಳಾ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ. ಇಷ್ಟೆಲ್ಲ ಆದರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಈಗಲಾದರೂ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv