ಹೆಲಿಕಾಪ್ಟರ್ ದುರಂತ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆಯಾಗಲಿ: ಸುಬ್ರಮಣಿಯನ್ ಸ್ವಾಮಿ

Public TV
1 Min Read
subramanian swamy 3

ಉಡುಪಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿಸಂತೆ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ಗಂಭೀರ ತನಿಖೆ ಆಗಬೇಕಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿಯ ತನಿಖೆಯಾಗಬೇಕು ಎಂದು ಕೇಂದ್ರದ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದಾರೆ.

BIPIN RAWATH

ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಪ್ರಯೋಜನವಿಲ್ಲ. ಹಿರಿಯ ಸುಪ್ರೀಂ ಕೋರ್ಟ್ ಜಡ್ಜ್ ಮೂಲಕ ತನಿಖೆ ನಡೆಸಬೇಕು. ಈ ಬಗ್ಗೆ ಪ್ರಧಾನಿಗಳು ಜನರಿಗೆ ಸೂಕ್ತ ಮಾಹಿತಿ ನೀಡಬೇಕು ಜನಸಾಮಾನ್ಯರಿಗೆ ಸತ್ಯಾಂಶ ತಿಳಿಯಬೇಕು ಎಂದರು. ಇದನ್ನೂ ಓದಿ: ಏನಿದು ಸಿಡಿಎಸ್ ಹುದ್ದೆ? ಈ ಹುದ್ದೆಯನ್ನು ಸೃಷ್ಟಿಸಿದ್ದು ಯಾಕೆ? – ಇಲ್ಲಿದೆ ಸಮಗ್ರ ವಿವರ

bipin rawats

ದೇಶದ ಸುರಕ್ಷತೆಯ ದೃಷ್ಟಿಯಿಂದ ಇದೊಂದು ಗಂಭೀರ ಎಚ್ಚರಿಕೆಯಾಗಿದೆ. ಈ ದುರ್ಘಟನೆಯಿಂದ ನನಗೆ ಶಾಕ್ ಆಗಿದೆ. ಘಟನೆ ನಡೆದಿರುವ ಬಗ್ಗೆ ಮಾಧ್ಯಮಗಳಿಂದ ತಿಳಿದಿದೆ. ಹೆಚ್ಚಿನ ಮಾಹಿತಿ ನನ್ನಲ್ಲಿ ಇಲ್ಲ. ತಿಳಿದುಕೊಂಡು ಪ್ರತಿಕ್ರಿಯೆ ಕೊಡುತ್ತೇನೆ ಎಂದರು. ಇದನ್ನೂ ಓದಿ: 2015ರಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಪಾರಾಗಿದ್ದರು ಬಿಪಿನ್ ರಾವತ್

ರಾವತ್ ದಂಪತಿ ಸೇರಿ 14 ಮಂದಿ Mi-17V5 ಸೇನಾ ಹೆಲಿಕಾಪ್ಟರ್‌ನಲ್ಲಿ ತಮಿಳುನಾಡಿನ ವೆಲ್ಲಿಂಗ್ಟನ್‍ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಊಟಿ ಬಳಿಯ ಕೂನೂರಿನ ಸಮೀಪ ಬರುತ್ತಿದ್ದಂತೆ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ಪತನಗೊಂಡಿದೆ. ಪರಿಣಾಮ 13 ಮಂದಿ ಮೃತಪಟ್ಟಿದ್ದು, ಒಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *