LatestLeading NewsMain PostNational

ನಿಮಿಷಗಳ ಅಂತರದಲ್ಲಿ ಲ್ಯಾಂಡ್ ಆಗಬೇಕಿದ್ದ Mi-17V5 ಪತನ – 11 ಮಂದಿಯ ಮೃತದೇಹ ಪತ್ತೆ

ಚೆನ್ನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸಂಚರಿಸುತ್ತಿದ್ದ Mi-17V5 ಸೇನಾ ಹೆಲಿಕಾಪ್ಟರ್ ಇನ್ನೇನು ನಿಮಿಷಗಳ ಅಂತರದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಪತನಗೊಂಡು ಈಗಾಗಲೇ 11 ಮಂದಿ ಸಾವನ್ನಪ್ಪಿದ್ದು ರಾವತ್ ಸೇರಿ 3 ಮಂದಿಯ ಸ್ಥಿತಿ ಗಂಭೀರವಾಗಿದೆ.

ತಮಿಳುನಾಡು ಪೊಲೀಸ್ ಮತ್ತು ಕೂನೂರಿನಲ್ಲಿರುವ ಭಾರತೀಯ ಸೇನಾ ಉನ್ನತ ಮೂಲಗಳ ಪ್ರಕಾರ, ರಾವತ್ ಪತ್ನಿ ಸೇರಿ 11 ಮಂದಿ ಸಾವನ್ನಪ್ಪಿದ್ದು, ರಾವತ್ ಹಾಗೂ ಇತರ ಮೂವರಿಗೆ ಸುಟ್ಟ ಗಾಯಗಳಾಗಿದ್ದು ಅವರಿಗೆ ಕೊಯಮತ್ತೂರು ಜನರಲ್ ಆಸ್ಪತ್ರೆಯಿಂದ ಆರು ತಜ್ಞ ವೈದ್ಯರ ತಂಡ ಕೂನೂರು ಸೇನಾ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಮುಂದುವರಿಸುತ್ತಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: CDS ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ- ಪತ್ನಿ ಸೇರಿ11 ಮಂದಿ ಸಾವು

ವೆಲ್ಲಿಂಗ್ಟನ್‍ನ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿನಲ್ಲಿ ಇಂದು ಮಧ್ಯಾಹ್ನ ನಡೆಯಲಿದ್ದ ಕೆಡೆಟ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾವತ್ ಸೇರಿ 14 ಮಂದಿ ಹೆಲಿಕಾಪ್ಟರ್‌ನಲ್ಲಿ ಆಗಮಿಸುತ್ತಿದ್ದರು. ಇನ್ನೇನು ಲ್ಯಾಂಡ್‌ ಆಗಲು 10 ಕಿ.ಮೀ. ಇರುವಂತೆ ಮಧ್ಯಾಹ್ನ 12:20ರ ಸುಮಾರಿಗೆ ಹೆಲಿಕಾಪ್ಟರ್ ಮರಕ್ಕೆ ಡಿಕ್ಕಿಯಾಗಿ ಪತನಗೊಂಡಿದೆ. ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದವರಲ್ಲಿ 11 ಮಂದಿ ಸಾವನ್ನಪ್ಪಿ, 3 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ತೆರಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ, ಸಿದ್ದರಾಮಯ್ಯ ಸಿಎಂ ಆಗ್ತಾರೆ ಎಂದು ಮತಯಾಚಿಸಿದ ಎಂ.ಶಂಕರ್

Leave a Reply

Your email address will not be published.

Back to top button