ಲಕ್ನೋ: ಉತ್ತರ ಪ್ರದೇಶದ ಕನೌಜ್ ರೈಲ್ವೆ (Kannauj railway station) ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲ್ಛಾವಣಿ ಕುಸಿದಿದ್ದು, ಹಲವರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.
ಇಂದು ಮಧ್ಯಾಹ್ನ ಈ ಅವಘಡ ಸಂಭವಿಸಿದ್ದು, ನಿಲ್ದಾಣದ ನಿರ್ಮಾಣದ ಯೋಜನೆಯ ಭಾಗವಾಗಿ ಎರಡು ಅಂತಸ್ತಿನ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಕಟ್ಟಡ ಮೇಲ್ಛಾವಣಿ ಕುಸಿದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ಇದನ್ನೂ ಓದಿ:ಸಚಿನ್ ಆತ್ಮಹತ್ಯೆ ಕೇಸ್ – ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದವರ ಪೈಕಿ ನಾಲ್ವರು ನಾಪತ್ತೆ
Advertisement
Advertisement
ಅಪಘಾತದ ಸಮಯದಲ್ಲಿ 35 ಕಾರ್ಮಿಕರು ಸ್ಥಳದಲ್ಲಿದ್ದರು ಎನ್ನಲಾಗಿದ್ದು, ಸ್ಥಳಕ್ಕೆ ರೈಲ್ವೆ, ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಆಗಮಿಸಿದ್ದಾರೆ. ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಇಲ್ಲಿಯವರೆಗೂ 23 ಕಾರ್ಮಿಕರನ್ನು ರಕ್ಷಿಸಲಾಗಿದೆ.
Advertisement
ಈ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ಶುಭ್ರಂತ್ ಕುಮಾರ್ ಶುಕ್ಲ ಮಾತನಾಡಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ, ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲ್ಛಾವಣಿಯ ಶಟರ್ ಕುಸಿದು ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.
Advertisement
ರಾಜ್ಯ ಸರ್ಕಾರ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 5000 ರೂ. ಪರಿಹಾರವನ್ನು ಘೋಷಿಸಿದೆ.
ರಕ್ಷಣಾ ಕಾರ್ಯಚರಣೆಯ ಸಹಾಯಕ್ಕಾಗಿ ಲಕ್ನೋದಿಂದ ರಾಜ್ಯ ವಿಪತ್ತು ಪರಿಹಾರ ಪಡೆಯನ್ನು ಕರೆಯಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಈಶಾನ್ಯ ರೈಲ್ವೆ ತಿಳಿಸಿದೆ.ಇದನ್ನೂ ಓದಿ: ಅಯೋಧ್ಯೆ ಬಾಲರಾಮನಿಗೆ ಮಹಾ ಅಭಿಷೇಕ, ಭಕ್ತರಿಗೆ ಮಂಗಳ ದರ್ಶನ