ನವದೆಹಲಿ: ತ್ರಿವಳಿ ತಲಾಖ್ ಅನ್ನು ನಿಷೇಧಿಸುವ ತಮ್ಮ ಸರ್ಕಾರದ ನಿರ್ಧಾರ ಮುಸ್ಲಿಂ ಮಹಿಳೆಯರಿಗೆ (Muslim Women) ಸುರಕ್ಷತಾ ಭಾವನೆಯನ್ನು ಹೆಚ್ಚಿಸಿದೆ. ಮುಂಬರುವ ರಕ್ಷಾ ಬಂಧನ (Raksha Bandhan) ಹಬ್ಬವನ್ನು ಮುಸ್ಲಿಂ ಮಹಿಳೆಯರೊಂದಿಗೂ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ.
2024ರ ಲೋಕಸಭಾ ಚುನಾವಣೆ ಹಿನ್ನೆಲೆ ಸೋಮವಾರ ರಾತ್ರಿ ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಜಾರ್ಖಂಡ್‌ನ ಬಿಜೆಪಿ ನೇತೃತ್ವದ ಎನ್‌ಡಿಎ ಸಂಸದರ ಸಭೆಯನ್ನು ನಡೆಸಿದ್ದು, ಈ ವೇಳೆ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.
Advertisement
Advertisement
ಸಮಾಜದ ಪ್ರತಿಯೊಂದು ವರ್ಗದವರೊಂದಿಗೆ ಸಂಪರ್ಕ ಸಾಧಿಸುವುದು ಅತ್ಯಗತ್ಯ. ಮುಸ್ಲಿಂ ಪುರುಷರು ತಮ್ಮ ಪತ್ನಿಯರಿಗೆ ತ್ವರಿತವಾಗಿ ನೀಡುವ ವಿಚ್ಛೇದನದ ಪದ್ಧತಿಯನ್ನು ಈ ಸರ್ಕಾರ ಅಪರಾಧ ಎಂದು ಪರಿಗಣಿಸಿದೆ. ಈ ನಿರ್ಧಾರ ಮುಸ್ಲಿಂ ಮಹಿಳೆಯರಲ್ಲಿ ಹೆಚ್ಚಿನ ಧೈರ್ಯ ತುಂಬಿದೆ. ಈ ಬಾರಿಯ ರಕ್ಷಾ ಬಂಧನದ ಸಮಯದಲ್ಲಿ ಈ ಅಲ್ಪಸಂಖ್ಯಾತ ಮಹಿಳೆಯರನ್ನು ತಲುಪುವ ಕೆಲಸ ಆಗಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಕೆಲ ಸಂಸದರಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೆಯಲ್ಲಿ ಬೈಕ್, ಆಟೋ ನಿಷೇಧ – ಮೊದಲ ದಿನವೇ 137 ಕೇಸ್
Advertisement
2019 ರಲ್ಲಿ ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ. ಮುಸ್ಲಿಮರ ತ್ರಿವಳಿ ತಲಾಖ್ ಅಭ್ಯಾಸವನ್ನು ಕಾನೂನು ಬಾಹಿರ ಹಾಗೂ ಪತಿಗೆ ಜೈಲು ಶಿಕ್ಷೆ ವಿಧಿಸುವ ಅಪರಾಧ ಎಂದು ಘೋಷಿಸಿದೆ.
Advertisement
ರಕ್ಷಾ ಬಂಧನ ಹಬ್ಬ ಸಹೋದರ – ಸಹೋದರಿಯರ ನಡುವಿನ ಬಾಂಧವ್ಯದ ಆಚರಣೆಯಾಗಿದೆ. ಈ ಬಾರಿ ಹಬ್ಬ ಆಗಸ್ಟ್ 30 ರಂದು ಬರಲಿದೆ. ಇದನ್ನೂ ಓದಿ: 200 ರನ್‌ಗಳ ಭರ್ಜರಿ ಗೆಲುವು – ವಿಂಡೀಸ್ ವಿರುದ್ಧ ಸತತ 13ನೇ ಏಕದಿನ ಸರಣಿ ಗೆದ್ದ ಭಾರತ
Web Stories