ಬೆಂಗಳೂರು: ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ನುಡಿದಂತೆ ನಡೆದುಕೊಳ್ಳಲು ವಿಫಲರಾಗಿದ್ದಾರೆ. ಹೀಗಾಗಿ ನಿರುದ್ಯೋಗ ದಿನ ಆಚರಣೆ ಜತೆಗೆ ನಿರುದ್ಯೋಗಿ ಯುವಕರು ತಮ್ಮ ಪದವಿ ಪ್ರಮಾಣ ಪತ್ರವನ್ನು ಮೋದಿ ಅವರಿಗೆ ಹಿಂದಿರುಗಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರೆಕೊಟ್ಟಿದ್ದಾರೆ.
ದೇಶದಲ್ಲಿ ನಿರುದ್ಯೋಗ ಹೆಚ್ಚಾಗಲು ಕಾರಣವಾದ @narendramodi ಅವರ ಜನ್ಮದಿನವನ್ನು @IYC ಅಧ್ಯಕ್ಷ @srinivasiyc ಅವರ ನೇತೃತ್ವದಲ್ಲಿ ನಿರುದ್ಯೋಗಿಗಳ ದಿನ ಎಂದು ಪ್ರತಿಭಟನೆಗಳ ಮೂಲಕ ಆಚರಿಸಿದ್ದರಲ್ಲಿ ತಪ್ಪೇನಿದೆ?
ಯುವಕರಿಗೆ ಕರೆ ನೀಡುತ್ತಿದ್ದೇನೆ, ತಾವೆಲ್ಲ ತಮ್ಮ ಪದವಿ ಪ್ರಮಾಣಪತ್ರವನ್ನು ಮೋದಿಯವರಿಗೆ ಕಳುಹಿಸಿ ಕೊಡಿ.
– @DKShivakumar
— Karnataka Congress (@INCKarnataka) September 18, 2021
Advertisement
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿಕೆಶಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳು ನುಡಿದಂತೆ ನಡೆಯಬೇಕು. ಅದೇ ನಮ್ಮ ನೀತಿ ಹಾಗೂ ಧರ್ಮ. ನಾವು ಜನರ ಸೇವೆ ಮಾಡಲು ಬಂದಿದ್ದು, ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಇದನ್ನು ನಮ್ಮ ದೇಶ ಹಾಗೂ ನಾಡಿನ ಎಲ್ಲ ಧರ್ಮದಲ್ಲೂ ಬಸವಣ್ಣನವರ ಕಾಲದಿಂದಲೂ ನಾಯಕರು ಪ್ರತಿಪಾದಿಸಿಕೊಂಡು ಬಂದಿದ್ದಾರೆ ಎಂದರು.
Advertisement
Advertisement
ಪ್ರಧಾನಿ ನರೇಂದ್ರ ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದರು. 2 ಕೋಟಿ ಸರ್ಕಾರಿ ಉದ್ಯೋಗ ನೀಡಲು ಸಾಧ್ಯವಾಗದಿದ್ದರೂ ಕನಿಷ್ಠ ಖಾಸಗಿ ಉದ್ಯೋಗಗಳಾದರೂ ಸೃಷ್ಟಿಯಾಗುವಂತೆ ಮಾಡಬೇಕಿತ್ತು. ಉದ್ಯೋಗ ಸೃಷ್ಟಿಗೆ ಅಗತ್ಯ ನೀತಿ ರೂಪಿಸಬೇಕಾಗಿತ್ತು ಎಂದರು. ಇದನ್ನೂ ಓದಿ: ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್
Advertisement
ಪ್ರಧಾನಿ @narendramodi ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದು, ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ.
ಕೋವಿಡ್, ಲಾಕ್ ಡೌನ್ ನಂತಹ ಬಿಕ್ಕಟ್ಟಿನ ಸಮಯದಲ್ಲೇ 2 ಕೋಟಿ ಉದ್ಯೋಗಗಳು ನಷ್ಟವಾದವು.
ನಂತರದಲ್ಲೂ @BJP4India ಸರ್ಕಾರ ಉದ್ಯೋಗ ಸೃಷ್ಟಿಗೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸಲಿಲ್ಲ.
– @DKShivakumar pic.twitter.com/JJTstpARHN
— Karnataka Congress (@INCKarnataka) September 18, 2021
ಕೋವಿಡ್ ಸಂದರ್ಭದಲ್ಲಿ ದೇಶದಲ್ಲಿ 2 ಕೋಟಿ ಉದ್ಯೋಗ ನಷ್ಟವಾಗಿದೆ. ಸರ್ಕಾರ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಜನ್ಮದಿನವನ್ನು ನಮ್ಮ ಯೂಥ್ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ?’ ಕೇವಲ ನಿರುದ್ಯೋಗ ದಿನ ಆಚರಣೆ ಮಾಡುವುದಷ್ಟೇ ಅಲ್ಲ, ಎಲ್ಲ ನಿರುದ್ಯೋಗಿ ಯುವಕರು ತಮ್ಮ ಪದವಿ ಪ್ರಮಾಣ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದಿರುಗಿಸಬೇಕು ಎಂದು ಕರೆ ನೀಡುತ್ತೇನೆ ಎಂದರು.