ನ್ಯೂಯಾರ್ಕ್: ಭಾರತದ (India) ಹೆಮ್ಮೆಯ ಚಂದ್ರಯಾನ-3 (Chandrayaan-3) ಮಿಷನ್ ಯಶಸ್ವಿಯಾದ ಹಿನ್ನೆಲೆ ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಮಿಷನ್ (India’s Permanent Mission To UN) ಶುಕ್ರವಾರ ಸಂಭ್ರಮಾಚರಣೆ ಮಾಡಿದೆ.
ಚಂದ್ರಯಾನ-3 ಮಿಷನ್‌ನ ಯಶಸ್ವಿಯನ್ನು ಗುರುತಿಸುತ್ತಾ ನಾವು ನ್ಯೂಯಾರ್ಕ್‌ನಲ್ಲಿರುವ ಖಾಯಂ ಮಿಷನ್‌ಗಳಿಂದ ನಮ್ಮ ಸಹೋದ್ಯೋಗಿಗಳು ಒಟ್ಟಾಗಿದ್ದೇವೆ. ಈ ಸಂದರ್ಭದಲ್ಲಿ ನಿಮ್ಮ ಉಪಸ್ಥಿತಿ ಹಾಗೂ ಅಚಲ ಬೆಂಬಲಕ್ಕಾಗಿ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ ಎಂದು ಭಾರತೀಯ ಖಾಯಂ ಮಿಷನ್ ಟ್ವಿಟ್ಟರ್‌ನಲ್ಲಿ ವಿಶ್ವಸಂಸ್ಥೆಗೆ ತಿಳಿಸಿದೆ.
Advertisement
Advertisement
ವಿಶ್ವಸಂಸ್ಥೆಯ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್, ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದಿರುವುದು ಐತಿಹಾಸಿಕ ಕ್ಷಣವಾಗಿದೆ. ಭಾರತದ ಚಂದ್ರಯಾನ-3 ಮಿಷನ್ ತನ್ನ ವಿಕ್ರಮ್ ಲ್ಯಾಂಡರ್ ಮಾಡ್ಯೂಲ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಸಿತು. ಇದರ ಗಮನಾರ್ಹ ಸಂಗತಿಯೆಂದರೆ, ವಿಶ್ವದ ಯಾವುದೇ ದೇಶ ಇಲ್ಲಿಯವರೆಗೆ ತಲುಪಲು ಸಾಧ್ಯವಾಗದ ಚಂದ್ರನ ದಕ್ಷಿಣ ಧ್ರುವವನ್ನು ಭಾರತ ತಲುಪಿದೆ ಎಂದು ಅವರು ಶ್ಲಾಘಿಸಿದರು.
Advertisement
Advertisement
ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಭಾರತದ ಉಪಸ್ಥಿತಿಯನ್ನು ಗುರುತಿಸುವುದು ಮಾತ್ರವಲ್ಲದೆ 1.4 ಶತಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಸಂಕೇತಿಸುತ್ತದೆ. ಅದಕ್ಕೂ ಮೀರಿ ನಾವು ಚಂದ್ರನ ದಕ್ಷಿಣ ಧ್ರುವದ ಬಳಿ ಇಟ್ಟಿರುವ ಹೆಜ್ಜೆ ಮಾನವೀಯತೆಗೆ ಐತಿಹಾಸಿಕ ಕ್ಷಣವಾಗಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ತಮಿಳುನಾಡಿಗೆ ಕೆಆರ್‌ಎಸ್ ನೀರು ಬಂದ್ – ಇಂದು ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ವಿಚಾರಣೆ
ಚಂದ್ರಯಾನ-3 ಬುಧವಾರ ಚಂದ್ರನ ಮೇಲೆ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ನಡೆಸಿತು. ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಮಿಷನ್‌ನ ನೌಕೆಯನ್ನು ಉಡಾವಣೆ ಮಾಡಲಾಗಿತ್ತು. ಇದನ್ನೂ ಓದಿ: ಚುನಾವಣಾ ಅಕ್ರಮ ಆರೋಪ – ಡೊನಾಲ್ಡ್ ಟ್ರಂಪ್ ಅರೆಸ್ಟ್
Web Stories