ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಹಾಲಿನ (Milk Price Hike) ದರ ಹೆಚ್ಚಸಿದ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಚಿಮುಲ್)ದ ನಿರ್ದೇಶಕರು ಹಾಗೂ ರೈತರು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿ ಇರುವ ಚಿಮುಲ್ ಮೆಗಾ ಡೈರಿ ಮುಂದೆ ಸಂಭ್ರಮಾಚರಣೆ ನಡೆಸಿದರು.
ರಾಜ್ಯ ಸರ್ಕಾರ ಪ್ರಸ್ತುತ ಹಾಲಿನ ದರದ ಮೇಲೆ ಹೆಚ್ಚುವರಿಯಾಗಿ ಪ್ರತಿ ಲೀಟರ್ಗೆ 8 ರೂಪಾಯಿ ಹೆಚ್ಚಳ ಘೋಷಿಸಿದ್ದು, ಇದರಲ್ಲಿ 1 ರೂ. ಹಾಲು ಒಕ್ಕೂಟಗಳಿಗೆ ಹಾಗೂ 7 ರೂ. ಹಾಲು ಉತ್ಪಾದಕ ರೈತರಿಗೆ ನೀಡುವುದಾಗಿ ಪ್ರಕಟಿಸಿದೆ. ಸರ್ಕಾರದ ಈ ನಿರ್ಧಾರದಿಂದ ಸಂತಸಗೊಂಡ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಚಿಮುಲ್)ದ ನಿರ್ದೇಶಕರು ಹಾಗೂ ರೈತರು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿ ಇರುವ ಚಿಮುಲ್ ಮೆಗಾ ಡೈರಿ ಮುಂದೆ ಸಂಭ್ರಮಿಸಿದರು.ಇದನ್ನೂ ಓದಿ: ನ.13 ರಂದೇ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ – ತೇಜಸ್ವಿ ಸೂರ್ಯ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಸಹಕಾರ ಸಚಿವ ಲಕ್ಷ್ಮಣ ಸವದಿ ಹಾಗೂ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರ ಭಾವಚಿತ್ರಗಳಿಗೆ ಹಾಲಿನ ಅಭಿಷೇಕ ಮಾಡಿ ರಾಜ್ಯ ಸರ್ಕಾರಕ್ಕೆ ಜೈಕಾರ ಕೂಗಿದರು.
ಹಾಲಿನ ದರ ಏರಿಕೆಯಿಂದ ಹೈನುಗಾರಿಕೆ ನಂಬಿ ಜೀವನ ನಡೆಸುತ್ತಿರುವ ರೈತರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದ ಚಿಮುಲ್ ನಿರ್ದೇಶಕ ಅಶ್ವಸ್ಥನಾರಾಯಣ ಬಾಬು, ಭರಣಿ ವೆಂಕಟೇಶ ಹಾಗೂ ರೈತರು, ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು. ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ಘೋಷಿಸಿರುವ 7 ರೂಪಾಯಿ ನೇರವಾಗಿ ರೈತರಿಗೆ ಸಿಗುವುದರಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ನೆರವು ದೊರೆಯಲಿದೆ ಎಂದರು.ಇದನ್ನೂ ಓದಿ: ಬಿ.ವೈ ವಿಜಯೇಂದ್ರ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ತೀವ್ರ ಆಕ್ಷೇಪ – ಕ್ಷಮೆಯಾಚನೆಗೆ 3 ದಿನಗಳ ಗಡುವು
