ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Loksabha Election 2024) ಯಾರೆಲ್ಲಾ ಸೆಲೆಬ್ರಿಟಿಗಳು ಗೆದ್ದರು. ಗದ್ದುಗೆಯ ಗುದ್ದಾಟದಲ್ಲಿ ಸೋತವರ್ಯಾರು, ಗೆದ್ದವರು ಯಾರು? ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ:ಸುದೀಪ್‌ಗೆ ‘ಸಪ್ತಸಾಗರದಾಚೆ ಎಲ್ಲೋ’ ನಿರ್ದೇಶಕ ಆ್ಯಕ್ಷನ್ ಕಟ್
Advertisement
ಲೋಕಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಮುಂದೆ ಕ್ವೀನ್ ಕಂಗನಾ (Kangana Ranaut) ಗೆದ್ದಿದ್ದಾರೆ. ಹಿಮಾಚಲ ಪ್ರದೇಶ ಮಂಡಿಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. 70000 ಸಾವಿರಕ್ಕೂ ಅಧಿಕ ಮತಗಳಿಂದ ನಟಿ ಗೆದ್ದಿದ್ದಾರೆ. ತಮ್ಮ ಮೊದಲ ಗೆಲುವನ್ನು ನರೇಂದ್ರ ಮೋದಿಗೆ ಅರ್ಪಿಸಿದ್ದಾರೆ.
Advertisement
Advertisement
ಮೇ 13ರಂದು ನಡೆದ ಆಂಧ್ರಪ್ರದೇಶದ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 1,32,725 ಮತಗಳನ್ನು ಪಡೆಯುವ ಮೂಲಕ ಪವನ್ ಕಲ್ಯಾಣ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜಗನ್ ಮೋಹನ್ ರೆಡ್ಡಿಗೆ ಪವನ್ ಠಕ್ಕರ್ ಕೊಟ್ಟಿದ್ದಾರೆ.
Advertisement
ಬಾಲಿವುಡ್ ಡ್ರೀಮ್ ಗರ್ಲ್ ಹೇಮಾ ಮಾಲಿನಿ (Hema Malini) ಮಥುರಾದಲ್ಲಿ 3ನೇ ಬಾರಿ ಗೆಲುವಿನ ಭಾವುಟ ಹಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುಕೇಶ್ ವಿರುದ್ಧ ಭಾರೀ ಮತಗಳ ಅಂತರದಲ್ಲಿ ನಟಿ ಗೆದ್ದಿದ್ದಾರೆ.
ಉತ್ತರ ಪ್ರದೇಶದ ಮೀರತ್ ಕ್ಷೇತ್ರದಿಂದ ರಾಮಾಯಣ ರಾಮನ ಪಾತ್ರಧಾರಿ ಅರುಣ್ ಗೋವಿಲ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಮೊದಲ ಪ್ರಯತ್ನದಲ್ಲಿ ನಟ ಗೆಲುವು ಸಾಧಿಸಿದ್ದಾರೆ. ಬಾಲಿವುಡ್ ಹಿರಿಯ ನಟ ಶತ್ರುಜ್ಞ ಸಿನ್ಹಾ ಟಿಎಂಸಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ನಿಂತು ಗೆದ್ದಿದ್ದಾರೆ. ಮಲಯಾಳಂ ನಟ ಸುರೇಶ್ ಗೋಪಿ ಕೇರಳದ ತ್ರಿಶೂರ್ ಕ್ಷೇತ್ರದಿಂದ ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ.
ತೆಲುಗು ನಟ ನಂದಮೂರಿ ಬಾಲಕೃಷ್ಣ ಟಿಡಿಪಿ ಅಭ್ಯರ್ಥಿಯಾಗಿ ಹಿಂದೂಪುರದಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.
ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿ.ವೈ ರಾಘವೇಂದ್ರಗೆ ಪೈಪೋಟಿ ಕೊಡುವುದರಲ್ಲಿ ನಿರ್ಮಾಪಕಿ ಗೀತಾ ಸೋತಿದ್ದಾರೆ. ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಸ್ಮೃತಿ ಇರಾನಿ ಸೋಲು ಕಂಡಿದ್ದಾರೆ.
ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಟಿ ರೋಜಾ ಹೀನಾಯವಾಗಿ ಸೋತಿದ್ದಾರೆ. ತಮಿಳುನಾಡಿನ ವಿರುಧುನಗರ್ ಕ್ಷೇತ್ರದಿಂದ ನಟಿ ರಾಧಿಕಾ ಶರತ್‌ಕುಮಾರ್ ಬಿಜೆಪಿ ಸ್ಪರ್ಧಿಯಾಗಿ ಕಣಕ್ಕೆ ನಿಂತಿದ್ದರು. ನಟಿ ಹೀನಾಯವಾಗಿ ಸೋಲುಂಡಿದ್ದಾರೆ.