ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಸಿಮೆಂಟ್ ಲಾರಿ (Cement Lorry) ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ (Student) ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ (Anekal) ಪಟ್ಟಣದ ಹೊಸೂರು (Hosur) ಮುಖ್ಯರಸ್ತೆಯಲ್ಲಿ ನಡೆದಿದೆ.
ಇಂಚರ (20) ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿನಿ. ಹೊಂಪಲಘಟ್ಟ ಗ್ರಾಮದ ನಿವಾಸಿ ಇಂಚರ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಇಂಚರ ಕಾಲೇಜಿಗೆ ದ್ವಿಚಕ್ರ ವಾಹನದಲ್ಲಿ ಬಂದು ಹೋಗುತ್ತಿದ್ದಳು. ಇಂದು ಕೂಡ ಎಂದಿನಂತೆ ಸ್ಕೂಟಿಯಲ್ಲಿ ಬಂದು ಕಾಲೇಜು ಮುಗಿಸಿಕೊಂಡು ಮನೆ ಕಡೆ ಹೋಗುವಾಗ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಮದಗಜಗಳ ಕಾದಾಟದಲ್ಲಿ ಗಂಡಾನೆ ಬಲಿ – ಕಳ್ಳರಕೋಬೆ ಹಳ್ಳದಲ್ಲಿ ಕಳೇಬರ ಪತ್ತೆ
ಹೊಸೂರು ರಸ್ತೆಯ ಸವೆರಾ ಟೀ ಸ್ಟಾಲ್ ಬಳಿ ಸ್ಕೂಟಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರು ಮತ್ತು ಸ್ನೇಹಿತರ ಆಕ್ರಂದನ ಮುಗಿಲುಮುಟ್ಟಿದೆ. ಸದ್ಯ ಇಂಚರಾ ಮೃತದೇಹವನ್ನ ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರ 3.93 ಲಕ್ಷ ಕೋಟಿ ಕರಗಿದ್ದು ಯಾಕೆ?

