– 9.67 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಸಮ್ಮತಿ
ಬೆಂಗಳೂರು: ಅಕಾಲಿಕ ಮಳೆ ಹೊಡೆತದಿಂದ ತತ್ತರಿಸಿದ್ದ ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರ ಹೊಸ ವರ್ಷದ ಸನಿಹದಲ್ಲಿ ಗುಡ್‌ನ್ಯೂಸ್ ಕೊಟ್ಟಿದೆ.
ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಬೇಳೆ (Toor Dal) ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ(MSP) ಯಲ್ಲಿ ನಫೆಡ್ (NAFED) ಮತ್ತು ಎನ್‌ಸಿಸಿಎಫ್ (NCCF) ಮೂಲಕ ಆದ್ಯತೆ ಮೇಲೆ ತೊಗರಿ ಖರೀದಿಗೆ ತ್ವರಿತ ಅನುಮೋದನೆ ನೀಡಿದೆ.
ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿಬೇಳೆಯನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ನಫೆಡ್ (NAFED) ಮತ್ತು ಎನ್‌ಸಿಸಿಎಫ್ (NCCF) ಮೂಲಕ ಆದ್ಯತೆಯ ಮೇಲೆ ಖರೀದಿ ಮಾಡಲು ಶೀಘ್ರವಾಗಿ ಅನುಮೋದನೆ ನೀಡಿದ ಮಾನ್ಯ ಪ್ರಧಾನ ಮಂತ್ರಿ ಶ್ರೀ @narendramodi ಅವರಿಗೆ ಮತ್ತು ಕೇಂದ್ರ ಕೃಷಿ ಸಚಿವರಾದ ಶ್ರೀ @chouhanShivraj ಅವರಿಗೆ ನನ್ನ… pic.twitter.com/ttRUZvh9jM
— Pralhad Joshi (@JoshiPralhad) December 10, 2025
ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (pralhad joshi) ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರೈತರ ಹಿತರಕ್ಷಣೆಗೆ ಸದಾ ಬದ್ಧವಾಗಿರುವ ಕೇಂದ್ರ ಸರ್ಕಾರ, ತಮ್ಮ ವಿಶೇಷ ಮನವಿಗೆ ತಕ್ಷಣ ಸ್ಪಂದಿಸಿದೆ ಎಂದಿದ್ದಾರೆ.
90 ದಿನದೊಳಗೆ ಖರೀದಿಸಲು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವಾಣ್ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

