ಬೆಂಗಳೂರು: ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ಮತ್ತು ಕಾಂಗ್ರೆಸ್ ಮುಖಂಡರಿಗೆ ಈ ನಾಡಿನ ನೆಲ, ಜಲ, ಸಂಪತ್ತಿನ ಬಗ್ಗೆ ನೈಜ ಕಾಳಜಿ ಇದ್ದರೆ ಬೆಳಗಾವಿ ವಿಚಾರದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿಕೆ ವಿಷಯದಲ್ಲಿ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ತಿಳಿಸಬೇಕು ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಒತ್ತಾಯಿಸಿದರು.
ಬೆಂಗಳೂರಿನ (Bengaluru) ಹೋಟೆಲ್‌ವೊಂದರಲ್ಲಿ ಇಂದು ನಡೆದ ಬಿಜೆಪಿ ಲೋಕಸಭೆ ಕ್ಷೇತ್ರವಾರು ಸಭೆಯ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಕಾವೇರಿ ನೀರನ್ನು ತಮಿಳುನಾಡಿಗೆ ಕಳೆದ ಆರು ತಿಂಗಳಿಂದ ಹರಿಸುತ್ತಿದ್ದು ಅದರ ವಿಷಯದಲ್ಲೂ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದರು. ದೆಹಲಿ ಗಣರಾಜ್ಯೋತ್ಸವ ಪರೇಡ್ ವೇಳೆ ಸ್ತಬ್ಧಚಿತ್ರ ವಿಷಯದಲ್ಲಿ ಕರ್ನಾಟಕಕ್ಕೆ ನಿರಂತರವಾಗಿ 14 ವರ್ಷಗಳಿಂದ ಅವಕಾಶ ಸಿಕ್ಕಿದೆ. ಈಗ ಕೊಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿಲ್ಲ. ಕಳೆದ ವರ್ಷ ಕೂಡ ಕರ್ನಾಟಕಕ್ಕೆ ಅವಕಾಶ ಸಿಕ್ಕಿಲ್ಲ ಎಂದು ಹೇಳಿದಾಗ ರಾಜ್ಯದ ನಮ್ಮೆಲ್ಲ ಹಿರಿಯರು ಪ್ರಯತ್ನಿಸಿದಾಗ ಅವಕಾಶ ಲಭಿಸಿತ್ತು. ಈ ಬಾರಿ ಕರ್ನಾಟಕ, ಗೋವಾ ಸೇರಿ ನಾಲ್ಕೈದು ರಾಜ್ಯಗಳಿಗೆ ಅವಕಾಶ ಸಿಕ್ಕಿಲ್ಲ. ಕರ್ನಾಟಕಕ್ಕೆ ಅವಕಾಶ ಕೊಡಬಾರದೆಂಬ ದುರುದ್ದೇಶ ಇದರಲ್ಲಿ ಇಲ್ಲ. ಬೇರೆ ರಾಜ್ಯಕ್ಕೂ ಅವಕಾಶ ಕೊಡಬೇಕೆಂಬ ಸದುದ್ದೇಶವಿದೆ ಅಷ್ಟೇ ಎಂದು ನುಡಿದರು. ಇದನ್ನೂ ಓದಿ: ರಾಮಮಂದಿರ ದೇಶದ ಕತೆಯ ಪ್ರತಿಬಿಂಬ; ರಾಮನ ಬಗ್ಗೆ ಅಪಪ್ರಚಾರ ಸಲ್ಲದು: ಗುರೂಜಿ ರಿತೇಶ್ವರ್ ಮಹಾರಾಜ್
Advertisement
Advertisement
ಅವಕಾಶ ಸಿಗದ ಕರ್ನಾಟಕ ಮತ್ತಿತರ ರಾಜ್ಯಗಳಿಗೆ ಎಕ್ಸಿಬಿಷನ್‌ನಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದನ್ನು ಗಮನಿಸದೆ ಈ ನಾಡಿನ ಬಗ್ಗೆ ಮೊಸಳೆ ಕಣ್ಣೀರು ಹಾಕುವ ಕೆಲಸ ರಾಜ್ಯ ಕಾಂಗ್ರೆಸ್ ಸರ್ಕಾರದ್ದು ಎಂದು ಟೀಕಿಸಿದರು. ಕನ್ನಡಪರ ಹೋರಾಟಗಾರ ನಾರಾಯಣಗೌಡರ ಕುರಿತ ಸರ್ಕಾರದ ನಡೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಮಂಗಳವಾರ ಬಿಡುಗಡೆ ಆದೊಡನೆ ಮತ್ತೊಂದು ಕೇಸಿನಲ್ಲಿ ಒಳಗಡೆ ಹಾಕುವ ಪಿತೂರಿ ರಾಜ್ಯ ಸರ್ಕಾರದ್ದು ಎಂದು ಆಕ್ಷೇಪಿಸಿದರು. ಮೊಸಳೆ ಕಣ್ಣೀರು ಹಾಕುವುದನ್ನು ಬಿಡಿ. ಪ್ರಾಮಾಣಿಕವಾಗಿ ಎಲ್ಲಾ ವಿಷಯದಲ್ಲೂ ರಾಜ್ಯದ ಪರವಾಗಿ ನಿಲ್ಲಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಹೋಗಲ್ಲ: ಕಾಂಗ್ರೆಸ್
Advertisement
Advertisement
ಎಲ್ಲಾ ವಿಷಯದಲ್ಲೂ ಕೇಂದ್ರ ಸರ್ಕಾರ ರಾಜ್ಯದ ವಿರುದ್ಧ ಇದೆ ಎಂದು ಮಾನ್ಯ ಮುಖ್ಯಮಂತ್ರಿಗಳು ಬಿಂಬಿಸುತ್ತಿದ್ದಾರೆ. ಇದು ನಿಮಗೆ ಶೋಭೆ ತರುವುದಿಲ್ಲ. ಬೇರೆ ಬೇರೆ ವಿಷಯಗಳಲ್ಲಿ ನಿಮ್ಮ ನಡವಳಿಕೆಯನ್ನು ಜನತೆ ಗಮನಿಸುತ್ತಿದ್ದಾರೆ. ಬಿಜೆಪಿ ಸಂಘಟನೆ ದೃಷ್ಟಿಯಿಂದ ಇಂದಿನ ಸಭೆ ನಡೆದಿದೆ. ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರೆದ ಸಭೆ ಇದು ಎಂದರು. ಇದನ್ನೂ ಓದಿ: ಲೋಕಸಭೆ ಚುನಾವಣೆ 2024 – ಶಾಸಕರು, ಮಾಜಿ ಸಚಿವರಿಗೆ ಟಿಕೇಟ್ ನೀಡಲು SP ಪ್ಲ್ಯಾನ್