ನವದೆಹಲಿ: ಕಳೆದ ವರ್ಷ ಭಾರತದ (India) ಕೆಮ್ಮಿನ ಸಿರಪ್ (Cough Syrup) ಸೇವಿಸಿದ ಬಳಿಕ ಗ್ಯಾಂಬಿಯಾ (Gambia) ಹಾಗೂ ಉಜ್ಬೇಕಿಸ್ತಾನದಲ್ಲಿ (Uzbekistan) ಹಲವು ಮಕ್ಕಳ ಸಾವಾಗಿತ್ತು. ಈ ಘಟನೆಯ ಬಳಿಕ ಇದೀಗ ಭಾರತ ಸರ್ಕಾರ ಕೆಮ್ಮಿನ ಸಿರಪ್‌ಗಳನ್ನು ವಿದೇಶಕ್ಕೆ ರಫ್ತು ಮಾಡುವ ಮೊದಲು ಅದನ್ನು ಪರೀಕ್ಷೆಗೆ (Lab Test) ಒಳಪಡಿಸುವುದು ಕಡ್ಡಾಯಗೊಳಿಸಿದೆ.
ಯಾವುದೇ ಕೆಮ್ಮಿನ ಸಿರಪ್ ಅನ್ನು ರಫ್ತು ಮಾಡುವುದಕ್ಕೂ ಮೊದಲು ಸರ್ಕಾರಿ ಪ್ರಯೋಗಾಲಯ ನೀಡಿದ ವಿಶ್ಲೇಷಣೆಯ ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ. ಈ ನಿಯಮ ಜೂನ್ 1 ರಿಂದ ಜಾರಿಗೆ ಬರಲಿದೆ ಎಂದು ಮಂಗಳವಾರ ಆರೋಗ್ಯ ಸಚಿವಾಲಯ ತಿಳಿಸಿದೆ.
Advertisement
Advertisement
ಭಾರತ ಇಡೀ ವಿಶ್ವದಲ್ಲೇ ಅತಿ ದೊಡ್ಡ ಔಷಧೀಯ ಉದ್ಯಮವನ್ನು ಹೊಂದಿದೆ. ಆದರೆ ಕಳೆದ ವರ್ಷ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಹೆಚ್‌ಒ) ಭಾರತದ 3 ಕಂಪನಿಗಳು ತಯಾರಿಸಿದ ಕೆಮ್ಮಿನ ಸಿರಪ್‌ಗಳಲ್ಲಿ ವಿಷಕಾರಿ ಅಂಶವನ್ನು ಕಂಡು ಹಿಡಿದ ಬಳಿಕ ಅದರ ಖ್ಯಾತಿ ಅಲುಗಾಡುವಂತಾಯಿತು. ಇದನ್ನೂ ಓದಿ: ಭಾರೀ ಏರಿಕೆ ಕಂಡ Adani Enterprises ಷೇರು – ಮತ್ತಷ್ಟು ಹೂಡಿಕೆ ಮಾಡಿದ GQG
Advertisement
ಕಳೆದ ವರ್ಷ ಗ್ಯಾಂಬಿಯಾದ 70 ಹಾಗೂ ಉಜ್ಬೇಕಿಸ್ತಾನದ 19 ಮಕ್ಕಳ ಸಾವಾಗಿತ್ತು. ಬಳಿಕ ಮಕ್ಕಳ ಸಾವಿಗೆ ಭಾರತದ ಕಂಪನಿಗಳು ತಯಾರಿಸಿದ್ದ ಕೆಮ್ಮಿನ ಸಿರಪ್‌ಗಳ ಸಂಬಂಧವಿದೆ ಎಂಬುದು ತಿಳಿದುಬಂದಿತ್ತು.
Advertisement
ಸದ್ಯ ವಿದೇಶಗಳಿಗೆ ರಫ್ತು ಮಾಡುವ ಕೆಮ್ಮಿನ ಸಿರಪ್‌ಗಳ ಪರೀಕ್ಷೆಯನ್ನಷ್ಟೇ ಕೇಂದ್ರ ಕಡ್ಡಾಯಗೊಳಿಸಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಈ ಸಿರಪ್‌ಗಳನ್ನು ಮಾರಾಟ ಮಾಡುವುದಕ್ಕೂ ಮುನ್ನ ಪರೀಕ್ಷೆಯ ಅಗತ್ಯವಿದೆಯೇ ಎಂಬುದಕ್ಕೆ ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿಲ್ಲ. ಇದನ್ನೂ ಓದಿ: ಪಾಕಿಸ್ತಾನದಲ್ಲೂ ಜನ ಮೋದಿಯನ್ನು ಇಷ್ಟಪಡುತ್ತಾರೆ: ಅನೂಪ್ ಜಲೋಟಾ