-ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ
ನವದೆಹಲಿ: ಮಂಡ್ಯ ನಗರ ವರ್ತುಲ ರಸ್ತೆಯನ್ನು ಆದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumarswamy) ಅವರು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಸಂಸತ್ ಭವನದಲ್ಲಿರುವ ಗಡ್ಕರಿ ಅವರ ಕಚೇರಿಗೆ ತೆರಳಿ ಭೇಟಿಯಾದ ಕುಮಾರಸ್ವಾಮಿ ಅವರು, ಈಗಾಗಲೇ ಮಂಡ್ಯ (Mandya) ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ. ಆದರೆ ಪ್ರಾಧಿಕಾರದ ಅಂದಾಜು ವೆಚ್ಚ ಯೋಜನೆಗೆ ಸಾಕಾಗುವುದಿಲ್ಲ. 900 ಕೋಟಿ ರೂ. ವೆಚ್ಚದ ಪರಿಷ್ಕೃತ ಯೋಜನೆಗೆ ಒಪ್ಪಿಗೆ ಕೊಟ್ಟು ಅನುಷ್ಠಾನಗೊಳಿಸಬೇಕು ಎಂಬ ಮನವಿಗೆ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.ಇದನ್ನೂ ಓದಿ: ಮೈಸೂರು ಪೊಲೀಸರೇ ದಂಧೆ ನಡೆಸುತ್ತಿದ್ದಾರೆ, ಇದಕ್ಕೆ ಕಡಿವಾಣ ಹಾಕಿ: ಗೃಹ ಇಲಾಖೆಗೆ ಹೆಚ್.ವಿಶ್ವನಾಥ್ ಒತ್ತಾಯ
ಈ ಬಗ್ಗೆ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಕುಮಾರಸ್ವಾಮಿ ಅವರು, ಭೂಸ್ವಾಧೀನಕ್ಕೆ 550 ಕೋಟಿ ರೂ. ಹಾಗೂ ನಿರ್ಮಾಣ ಕಾರ್ಯಕ್ಕೆ 350 ಕೋಟಿ ರೂ. ಬೇಕಾಗುತ್ತದೆ. ಹೀಗಾಗಿ ಯೋಜನೆಗೆ 900 ಕೋಟಿ ರೂ. ಅಗತ್ಯವಿದೆ ಎಂಬುದನ್ನು ಮನವರಿಕೆ ಮಾಡಿದರು. ವರ್ತುಲ ರಸ್ತೆ ಯೋಜನೆ ಅನುಷ್ಠಾನಗೊಂಡರೆ ಮಂಡ್ಯ ನಗರದ ಬೆಳವಣಿಗೆ, ಅಭಿವೃದ್ಧಿಗೆ ಬಹಳ ಅನುಕೂಲ ಆಗುತ್ತದೆ ಎಂಬುದನ್ನು ವಿವರವಾಗಿ ತಿಳಿಸಿದರು.
ಮಂಡ್ಯ ಲೋಕಸಭೆ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಮಂಡ್ಯ ನಗರದ ವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆ ಸಚಿವ ಶ್ರೀ @nitin_gadkari ಅವರೊಂದಿಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು.
ಅಲ್ಲದೆ, ಕೋಲಾರ ಲೋಕಸಭೆ ಕ್ಷೇತ್ರವೂ ಸೇರಿ ಕರ್ನಾಟಕದ ಹಲವಾರು ಹೆದ್ದಾರಿ ಯೋಜನೆಗಳ… pic.twitter.com/6OVFJAZWzM
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 20, 2025
ಪಾಂಡವಪುರ ನಾಲ್ಕು ಪಥ ಹೆದ್ದಾರಿ ಅಭಿವೃದ್ಧಿ:
ಜೇವರ್ಗಿ-ಚಾಮರಾಜನಗರ (Chamarajanagar) ನಡುವೆ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥದಿಂದ ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿ ಮಾಡುವ ಬಗ್ಗೆಯು ಚರ್ಚೆ ನಡೆಸಿದರು.
ಜೇವರ್ಗಿ- ಚಾಮರಾಜನಗರ ನಡುವೆ ಪಾಂಡವಪುರದ ಹೆದ್ದಾರಿ 150ಎ ದ್ವಿಪಥ ಹೆದ್ದಾರಿಯನ್ನು 597-560 ಕಿ.ಮೀನಿಂದ 606-670 ಕಿ.ಮೀ. ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿಪಡಿಸಲು ಒಪ್ಪಿಗೆ ಕೊಡಬೇಕು ಹಾಗೂ ಪಾಂಡವಪುರ (Pandavapura) ರೈಲು ನಿಲ್ದಾಣದ ಬಳಿ ಇರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುವ ರೈತರ ಅನುಕೂಲಕ್ಕಾಗಿ ಹೆದ್ದಾರಿ ಪಕ್ಕದಲ್ಲಿಯೇ ಟ್ರಕ್ ವೇ ನಿರ್ಮಾಣ ಮಾಡಬೇಕು. ಇತ್ತೀಚೆಗೆ ತಾವು ಯೋಜನೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದಾಗ ಸ್ಥಳೀಯ ಜನರು ಈ ಬಗ್ಗೆ ಮನವಿ ಮಾಡಿದ್ದರು. ಅಲ್ಲದೆ, ಖುದ್ದು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದೇನೆ. ಹೀಗಾಗಿ ಟ್ರಕ್ ವೇ ನಿರ್ಮಾಣ ಅಗತ್ಯವಾಗಿ ಆಗಬೇಕಿದೆ ಎಂದು ಮನವಿ ಮಾಡಿದರು.
ಹೆದ್ದಾರಿಯನ್ನು ನಾಲ್ಕು ಪಥಕ್ಕೆ ಅಭಿವೃದ್ಧಿ ಮಾಡುವುದರಿಂದ ಈ ಭಾಗದ ಅಭಿವೃದ್ಧಿ, ಸರಕು ಸಾಗಣೆಗೆ ಅನುಕೂಲ ಆಗುತ್ತದೆ. ವ್ಯಾಪಾರ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ದೊರೆಯುತ್ತದೆ. ಅಲ್ಲದೆ, ಕೋಲಾರ ಲೋಕಸಭೆ ಕ್ಷೇತ್ರವೂ ಸೇರಿ ಕರ್ನಾಟಕದ ಹಲವಾರು ಹೆದ್ದಾರಿ ಯೋಜನೆಗಳ ಮಂಜೂರಾತಿ ಹಾಗೂ ಚಾಲ್ತಿಯಲ್ಲಿರುವ ಯೋಜನೆಗಳನ್ನು ವೇಗಗತಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಮಾತುಕತೆ ನಡೆಸಿದರು.ಇದನ್ನೂ ಓದಿ: ಲೋಕಸಭೆಯಲ್ಲಿ ಡಿಎಂಕೆ ಸಂಸದರ ಟಿ-ಶರ್ಟ್ ಪ್ರತಿಭಟನೆ: ಸದನದಲ್ಲಿ ಗದ್ದಲ