ಬೆಂಗಳೂರು: ಮತದಾರರ ಪಟ್ಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಚುನಾವಣಾ ಆಯೋಗ ಈಗ ಅಧಿಕಾರಿಗಳ ಫೋನ್ ಕರೆ ತನಿಖೆಗೆ ಮುಂದಾಗಿದೆ.
Advertisement
ಬಿಬಿಎಂಪಿ (BBMP) ಚುನಾವಣಾ ವಿಭಾಗದ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಡಿಸಿ ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಲಾಗಿದ್ದು, ರಂಗಪ್ಪ ಅವರು ಚಿಕ್ಕಪೇಟೆ ಮತ್ತು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿದ್ದರೆ, ಶ್ರೀನಿವಾಸ್ ಅವರು, ಮಹದೇವಪುರ ಕ್ಷೇತ್ರ ಉಸ್ತುವಾರಿ ವಹಿಸಿಕೊಂಡಿದ್ದರು. ಈ ಮೂರು ಕ್ಷೇತ್ರದಲ್ಲಿ ಬಿಎಲ್‍ಓ ಐಡಿ ಕಾರ್ಡ್ ಇಟ್ಟಿಕೊಂಡು ಸರ್ವೆ ನಡೆಸಲಾಗಿತ್ತು. ಈ ವೇಳೆ ಇಬ್ಬರು ಐಎಎಸ್ ಅಧಿಕಾರಿಗಳ ಮೇಲೆ ಆರೋಪ ಕೇಳಿ ಬಂದ ಹಿನ್ನೆಲೆ ಅವರನ್ನು ಅಮಾನತುಗೊಳಿಸಲಾಗಿದೆ.
Advertisement
Advertisement
ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಶೀಘ್ರದಲ್ಲಿಯೇ ಅಮಾನತುಗೊಂಡ ಅಧಿಕಾರಿಗಳನ್ನು ವಿಚಾರಣೆ ನಡೆಸಲಿದ್ದು, ಬಿಎಲ್‍ಓ ಎಂಬ ಐಡಿ ಕಾರ್ಡ್ ವಿತರಣೆಗೆ ಅನುಮತಿ ನೀಡಿದ್ದು ಯಾರು? ನಿಮ್ಮ ಗಮನಕ್ಕೆ ಬಾರದೇ ನಿಮ್ಮ ಉಸ್ತುವಾರಿ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆ ಮಾಹಿತಿ ಕದ್ದಿದೆಯಾ? ಪ್ರಕರಣದ ಕುರಿತು ಸಂಪೂರ್ಣ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: ಜಮೀನಿನ ಖಾತೆ ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ ಕಿತ್ತೂರು ತಹಶೀಲ್ದಾರ್ ಲೋಕಾಯುಕ್ತ ಬಲೆಗೆ
Advertisement
ಇದೇ ಪ್ರಕರಣದಲ್ಲಿ ಬಿಬಿಎಂಪಿ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಫೋನ್ ಕಾಲ್ ಅನ್ನು ಚುನಾವಣಾ ಆಯೋಗ ಟ್ರ್ಯಾಪ್ ಮಾಡುತ್ತಿದೆ. ಇದರಿಂದ ಮಹತ್ವದ ಅಂಶಗಳು ಹೊರಬಿದ್ದರೆ, ಚಿಲುಮೆ ಜೊತೆ ಬಿಬಿಎಂಪಿ ಹಿರಿಯ ಅಧಿಕಾರಿ ನಂಟು ಬಯಲಾಗಲಿದೆ. ಒಂದು ವೇಳೆ ಕರ್ತವ್ಯದಲ್ಲಿ ಲೋಪ ಕಂಡು ಬಂದರೆ ಹಿರಿಯ ಅಧಿಕಾರಿಯನ್ನು ಬಂಧಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಬ್ರೆಜಿಲ್‍ನ ಎರಡು ಶಾಲೆಗಳಲ್ಲಿ ಶೂಟೌಟ್ – ಟೀಚರ್ ಸೇರಿ 3 ಸಾವು, 13 ಮಂದಿಗೆ ಗಾಯ