ಬೆಂಗಳೂರು: ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ತೊಗರಿ ಮತ್ತು ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್ ಟನ್ ತೊಗರಿ, 96,498 ಮೆಟ್ರಿಕ್ ಟನ್ ಕಡಲೆ ಖರೀದಿ ಮಾಡಲಿದೆ. ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ. ಹಾಗೂ ಕಡಲೆಗೆ 5,650 ರೂ. ದರವನ್ನು ನಿಗದಿ ಮಾಡಲಾಗಿದೆ.
Advertisement
ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ, ಕೊಪ್ಪಳ ಬೆಳಗಾವಿ, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ತೊಗರಿ ಖರೀದಿಸಲಾಗುತ್ತದೆ. ಇದನ್ನೂ ಓದಿ:ಚಾಂಪಿಯನ್ಸ್ ಟ್ರೋಫಿ 2025 ರ ವೇಳಾಪಟ್ಟಿ ಪ್ರಕಟ; ಫೆ.23ರ ಭಾನುವಾರ ಭಾರತ-ಪಾಕ್ ಮುಖಾಮುಖಿ
Advertisement
Advertisement
ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ ಕಲಬುರಗಿ, ಯಾದಗಿರಿ, ಬೀದರ್, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕಡಲೆಯನ್ನು ಖರೀದಿ ಮಾಡಲಾಗುತ್ತದೆ.
Advertisement
ಕೇಂದ್ರ ಸರ್ಕಾರದ ಅನುಮತಿ ಬೆನ್ನಲ್ಲೇ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಿಸುವಂತೆ ಜವಳಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ (Shivanand Patil) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.