– 2025ರಿಂದಲೇ ಕಾರ್ಯಾರಂಭ ಸಾಧ್ಯತೆ
ಚಿತ್ರದುರ್ಗ: ಹಲವು ದಶಕಗಳ ಕನಸಾದ ಚಿತ್ರದುರ್ಗ (Chitradurga) ಜಿಲ್ಲೆಯ ಜನರ ಪ್ರಮುಖ ಬೇಡಿಕೆಯಾಗಿದ್ದ ಕೇಂದ್ರೀಯ ವಿದ್ಯಾಲಯಕ್ಕೆ (KV) ಕೊನೆಗೂ ಕೇಂದ್ರ ಸರ್ಕಾರ ಅಸ್ತು ಎಂದಿದೆ.
Advertisement
ಡಿಸೆಂಬರ್ 06ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ನಡೆದ ಕೇಂದ್ರದ ಸಚಿವ ಸಂಪುಟ ಸಭೆಯಲ್ಲಿ ದೇಶಕ್ಕೆ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಕರ್ನಾಟಕ ರಾಜ್ಯಕ್ಕೂ ಮೂರು ಕೇಂದ್ರೀಯ ವಿದ್ಯಾಲಯ ಮಂಜೂರಾಗಿವೆ. ಚಿತ್ರದುರ್ಗ ಜಿಲ್ಲೆಯ ಕುಂಚಿಗನಾಳು ಗ್ರಾಮದ ಬಳಿಯ ಹೊಸ ಕೇಂದ್ರೀಯ ವಿದ್ಯಾಲಯ ಇದರಲ್ಲಿ ಸೇರಿದೆ. ಇದರೊಂದಿಗೆ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೂ ನೂತನ ಕೆವಿಗಳು ಮಂಜೂರಾಗಿವೆ. ಇದನ್ನೂ ಓದಿ: ಜಿ.ಪಂ ಸಿಇಓ ಸಹಿ ನಕಲು ಮಾಡಿ ಎಂಜಿನಿಯರ್‌ಗೆ ನೇಮಕಾತಿ ಪತ್ರ – ಎಫ್‌ಡಿಎ ಮೇಲೆ ಎಫ್‌ಐಆರ್
Advertisement
Advertisement
ಕೇಂದ್ರೀಯ ವಿದ್ಯಾಲಯದ ತರಗತಿಗಳು ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡುವ ಸಾಧ್ಯತೆಯಿದ್ದು, ತಾತ್ಕಾಲಿಕವಾಗಿ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ಪ್ರಾರಂಭವಾಗಲಿವೆ. ಮುಂದಿನ ಮೂರು ವರ್ಷದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಿ ನಂತರ ಅಲ್ಲಿ ಹೊಸ ತರಗತಿಗಳನ್ನು ಪ್ರಾರಂಭಿಸುವುದು ಕೇಂದ್ರೀಯ ವಿದ್ಯಾಲಯದ ನಿಯಮವಾಗಿದೆ. ಇದನ್ನೂ ಓದಿ: ಬೆಳಗ್ಗೆ ವಾಕಿಂಗ್‌ಗೆ ಹೋಗಿದ್ದ ಉದ್ಯಮಿಗೆ ಗುಂಡಿಕ್ಕಿ ಹತ್ಯೆ
Advertisement
ಮಾಜಿ ಸಂಸದ ಎ.ನಾರಾಯಣಸ್ವಾಮಿ ಶ್ರಮ ಅಪಾರ:
ಅತಿ ಹಿಂದುಳಿದ ಪ್ರದೇಶ ಎನಿಸಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸ ಕೇಂದ್ರೀಯ ವಿದ್ಯಾಲಯ ಆರಂಭವಾಗುವುದರ ಹಿಂದೆ ಕೇಂದ್ರದ ಮಾಜಿ ಸಚಿವರು, ಮಾಜಿ ಸಂಸದರೂ ಆಗಿರುವ ಎ.ನಾರಾಯಣಸ್ವಾಮಿ ಅವರ ಶ್ರಮ ಅಪಾರವಾಗಿದೆ. ಈ ಹಿಂದೆ ಅವರು ಕೇಂದ್ರೀಯ ವಿದ್ಯಾಲಯ ಆರಂಭಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ತಾತ್ಕಾಲಿಕ ತರಗತಿ ಆರಂಭಿಸಲು ಪತ್ರ ವ್ಯವಹಾರ ನಡೆಸಿ ಕೊಠಡಿಗಳನ್ನು ಮಂಜೂರು ಮಾಡಿಸಿದ್ದರು. 2021ರಲ್ಲೇ ಬಹುತೇಕ ಎಲ್ಲಾ ಪ್ರಕ್ರಿಯೆಗಳು ಅಂತಿಮವಾಗಿ ಎರಡು ವರ್ಷದ ಹಿಂದೆಯೇ ಕೇಂದ್ರೀಯ ವಿದ್ಯಾಲಯ ಆರಂಭವಾಗಲಿದೆ ಎನ್ನಲಾಗುತ್ತಿತ್ತು. ಇದನ್ನೂ ಓದಿ: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಆದರೆ, ಕೇಂದ್ರ ಸರ್ಕಾರ ದೇಶದ ಇತರೆ ರಾಜ್ಯಗಳ ಪ್ರಸ್ತಾವನೆಯ ಜೊತೆಗೆ ಒಟ್ಟಿಗೆ ಅನುಮೋದನೆ ನೀಡುವ ಉದ್ದೇಶದಿಂದ ಚಿತ್ರದುರ್ಗ ಕೇಂದ್ರೀಯ ವಿದ್ಯಾಲಯವನ್ನು ಪೆಂಡಿಂಗ್ ಇಟ್ಟಿತ್ತು. ಆದರೆ ಈ ಬಾರಿ ಕೇಂದ್ರದ ಸಂಪುಟ ಸಭೆಯಲ್ಲಿ ನಿರ್ಧರಿಸಿದಂತೆ ಕುಂಚಿಗನಾಳು ಬಳಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಈಗಾಗಲೇ ಭೂಮಿ ಸಿದ್ಧವಾಗಿದೆ. ವಿಆರ್‌ಎಲ್ ಸಮೀಪದಲ್ಲಿ ಹೊಸ ಕೇಂದ್ರೀಯ ವಿದ್ಯಾಲಯಕ್ಕೆ ಜಾಗ ಅಂತಿಮವಾಗಿದ್ದು, ಕೆಲ ದಿನಗಳಲ್ಲೇ ಕಟ್ಟಡ ನಿರ್ಮಾಣ ಕಾಮಗಾರಿಯೂ ಪ್ರಾರಂಭವಾಗಲಿದೆ. ಇದನ್ನೂ ಓದಿ: ಬಾಣಂತಿಯರ ಸರಣಿ ಸಾವು ಕೇಸ್ – ಬಳ್ಳಾರಿ ಜಿಲ್ಲಾಸ್ಪತ್ರೆ ಮೇಲೆ ‘ಲೋಕಾ’ ದಾಳಿ
ಗೋವಿಂದ ಕಾರಜೋಳ ಮೊದಲ ಪ್ರಯತ್ನ ಯಶಸ್ವಿ:
ಎ.ನಾರಾಯಣಸ್ವಾಮಿ ಅವರ ಪ್ರಯತ್ನಕ್ಕೆ ಪೂರಕವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನೂತನ ಸಂಸದರಾಗಿ ಆಯ್ಕೆಯಾಗಿ ಬಂದ ಗೋವಿಂದ ಕಾರಜೋಳ ಅವರು ಕೇಂದ್ರೀಯ ವಿದ್ಯಾಲಯ ಕುರಿತು ಮೊದಲ ದಿನವೇ ಅಧಿವೇಶನದಲ್ಲಿ ಸದ್ದು ಮಾಡಿದ್ದರು. ಸಂಸದರಾಗಿ ದೆಹಲಿಗೆ ತೆರಳಿದ ಮೊದಲ ದಿನವೇ ಕೇಂದ್ರದ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಹಿಂದುಳಿದ ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಪ್ರಧಾನಿ ಅಂಗಳ ತಲುಪಿದ ಮುಡಾ ಪ್ರಕರಣ – ಸಿಬಿಐಗೆ ವಹಿಸುವಂತೆ ವಕೀಲನಿಂದ ಪತ್ರ
ಅಲ್ಲದೇ ಮೊದಲ ದಿನವೇ ಸಂಸತ್ತಿನ ಅಧಿವೇಶನದಲ್ಲಿ ಚಿತ್ರದುರ್ಗದ ಕೇಂದ್ರೀಯ ವಿದ್ಯಾಲಯ ಆರಂಭದ ಕುರಿತು ಪ್ರಶ್ನೆ ಮಾಡಿದ್ದ ಹಿನ್ನೆಲೆ ಕೋಟೆನಾಡಿನ ಬಹುದಿನಗಳ ಕನಸಾದ ಕೇಂದ್ರಿಯ ವಿದ್ಯಾಲಯ ಮಂಜೂರಾಗಿದ್ದು, ಶೈಕ್ಷಣಿಕವಾಗಿ, ಆರ್ಥಿಕವಾಗಿ ಅತಿಹಿಂದುಳಿದ ಪ್ರದೇಶ ಎನಿಸಿರುವ ಚಿತ್ರದುರ್ಗಕ್ಕೆ ಇದೊಂದು ವರದಾನ. ಪ್ರತಿಭಾವಂತ ವಿದ್ಯಾರ್ಥಿಗಳಿಗೊಂದು ಸುವರ್ಣವಕಾಶ ಎನಿಸಿದೆ. ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ನಾಗರಿಕ ಸಹಾಯವಾಣಿ ಪ್ರಾರಂಭ