ನವದೆಹಲಿ: ಈ ತಿಂಗಳ ಕೊನೆಯ ವಾರದಲ್ಲಿ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವ (Central Government Cabinet Expansion) ಸಾಧ್ಯತೆಗಳಿದೆ. ಈ ಬಗ್ಗೆ ಸಮಾಲೋಚನಾ ಸಭೆಗಳು ಆರಂಭಗೊಂಡಿದ್ದು, ಎನ್ಡಿಎ ಒಕ್ಕೂಟ ಪಕ್ಷಗಳ ಜೊತೆಗಿನ ಸಭೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆಗೆ ಗೃಹ ಸಚಿವ ಅಮಿತ್ ಶಾ (Amit Shah) ಸಭೆ ನಡೆಸಿದ್ದಾರೆ.
Advertisement
ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ (JP Nadda), ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭಾಗವಹಿಸಿದ್ದರು. ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಸದೃಢ ಸಿದ್ಧತೆಗಾಗಿ ಕೇಂದ್ರ ಸಚಿವ ಸಂಪುಟದಲ್ಲಿ ಮಾತ್ರವಲ್ಲದೆ ರಾಜ್ಯಗಳು ಮತ್ತು ಕೇಂದ್ರ ಸಂಘಟನೆಯಲ್ಲೂ ಮಹತ್ವದ ಬದಲಾವಣೆಗಳನ್ನು ಮಾಡಲು ಚರ್ಚಿಸಲಾಗಿದೆ. ಇದನ್ನೂ ಓದಿ: ಮುಂದಿನ ಸಂಕ್ರಾಂತಿಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ
Advertisement
Advertisement
ಸಚಿವ ಸಂಪುಟದ ವಿಸ್ತರಣೆಗೂ ಮುನ್ನ ಜೆ.ಪಿ ನಡ್ಡಾ ಅವರ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆಯಾಗಲಿದೆ ಎಂದು ತಿಳಿದು ಬಂದಿದೆ. ಲೋಕಸಭೆ ಹಾಗೂ ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಅಧಿಕಾರವಧಿ ವಿಸ್ತರಿಸಲು ನಿರ್ಧರಿಸಿದೆ ಎನ್ನಲಾಗಿದೆ. ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಳಿಕ ರಾಜ್ಯಗಳ ಸಂಘಟನೆಯಲ್ಲಿ ಬದಲಾವಣೆ, ಅಗತ್ಯ ನಾಯಕತ್ವ ಬದಲಾವಣೆ ಹಾಗೂ ಕೇಂದ್ರ ಸಂಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಮುದ್ರೆ ಬೀಳಲಿದೆ. ಫೆಬ್ರವರಿ 15 ರೊಳಗೆ ಎಲ್ಲಾ ರೀತಿಯ ಬದಲಾವಣೆಗಳನ್ನು ಜಾರಿಗೆ ತರಲು ಯೋಜನೆ ರೂಪಿಸಲಾಗಿದೆ. ಇದನ್ನೂ ಓದಿ: ನಿರಾಣಿ ಆ ಹುಲಿ ಜೊತೆ ಮಾತಾಡಲಿ- ಯತ್ನಾಳ್ರನ್ನ ಹುಲಿಗೆ ಹೋಲಿಕೆ ಮಾಡಿದ ಸ್ವಾಮೀಜಿ
Advertisement
ನರೇಂದ್ರ ಮೋದಿ ಎರಡನೇ ಅವಧಿ ಸರ್ಕಾರದ ಕಡೆಯ ಸಂಪುಟದ ವಿಸ್ತರಣೆ ಇದಾಗಿದ್ದು, ರಾಜ್ಯಗಳಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಮತ್ತು ಚುನಾವಣಾ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಚಿಂತನೆ ನಡೆದಿದೆ. ಇದೇ ಸಮಯದಲ್ಲಿ ಎನ್ಡಿಎ ಒಕ್ಕೂಟದ ಮಿತ್ರ ಪಕ್ಷಗಳಿಗೂ ಆದ್ಯತೆ ನೀಡುವ ನಿಟ್ಟಿನಲ್ಲಿ ಸಮಾಲೋಚನೆ ನಡೆದಿದೆ ಎಂದು ತಿಳಿದು ಬಂದಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k