ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ದರವನ್ನು ಕಡಿತಗೊಳಿಸಲು ಮೂಲಕ ರಾಜ್ಯ ಸರ್ಕಾರ ಜಾರಿ ಮಾಡಿದ್ದ ನೀತಿಯನ್ನೇ ಕಾಪಿ ಹೊಡೆದಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕವನ್ನು ನೋಡಿಕೊಂಡು ಪೆಟ್ರೋಲ್ ಡೀಸೆಲ್ ದರವನ್ನು ಕಡಿಮೆ ಮಾಡುವ ಮೂಲಕ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ಕಾಪಿ ಹೊಡೆದಿದೆ. ಅಲ್ಲದೇ ಹಣಕಾಸು ಸಚಿವರು ರಾಜ್ಯ ಸರ್ಕಾರಗಳು ದರ ಇಳಿಕೆ ಮಾಡುವಂತೆ ಹೇಳಿದ್ದಾರೆ. ಆದರೆ ಈಗಾಗಲೇ ಕರ್ನಾಟಕ ಸರ್ಕಾರ ಬೆಲೆ ಇಳಿಕೆ ಮಾಡಿದ್ದು, ಇನ್ನೂ ಇಳಿಕೆ ಸಾಧ್ಯವೇ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಇಲ್ಲ: ಎಚ್‍ಡಿಕೆ
ಕರ್ನಾಟಕ ಸರ್ಕಾರ ಸಾಲಮನ್ನಾ ಸೇರಿದಂತೆ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಹಾಕಿಕೊಂಡಿದೆ. ಸಾಲಮನ್ನಾ ಕುರಿತ ಸುಗ್ರಿವಾಜ್ಞೆಯನ್ನು ರಾಷ್ಟ್ರಪತಿ ಅಂಗೀಕಾರಕ್ಕೆ ಕಳುಹಿಸಲಾಗಿದೆ. ಶುಕ್ರವಾರ ಸಿಎಂ ಕುಮಾರಸ್ವಾಮಿ ಕೂಡಾ ದೆಹಲಿಯ ಬರಲಿದ್ದು, ಈ ಸಂಬಂಧ ಕೇಂದ್ರದ ಹಲವು ಸಚಿವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ 2.50 ರೂ. ಇಳಿಕೆ
ಇದಕ್ಕೂ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗೆ ಅಧ್ಯಕ್ಷರ ಆಯ್ಕೆ ಸಂಬಂಧ ದೇವೇಗೌಡರನ್ನು ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾಗಿದ್ದರು. ಇವರಿಬ್ಬರು ಸುಮಾರು ಒಂದೂವರೆ ಗಂಟೆ ದೀರ್ಘಕಾಲ ಚರ್ಚೆ ನಡೆಸಿದ್ದರು. ಸಚಿವ ಸಂಪುಟಕ್ಕೆ ಒಟ್ಟು ಆರು ಖಾತೆಗಳನ್ನು ಭರ್ತಿ ಮಾಡಬೇಕಿದ್ದು, ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ನಲ್ಲಿ ಬಂಡಾಯದ ಬಿಸಿ ಬೂದಿ ಮುಚ್ಚಿದ ಕೆಂಡದಂತಿದ್ದು ಎಲ್ಲರಿಗೂ ಸಮಧಾನ ಪಡಿಸುವ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಜೆಟ್ ನಂತ್ರ ಪೆಟ್ರೋಲ್, ಡೀಸೆಲ್ ಆದಾಯ ಭಾರೀ ಕುಸಿತ!
ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸಿ ಖಾತೆ ಹಂಚಿಕೆ ಮಾಡಿ, ಬಂಡಾಯ ಏಳುವ ಶಾಕಸರಿಗೆ ನಿಗಮ ಮಂಡಳಿ ಅಧ್ಯಕ್ಷರಾಗಿ ಆಯ್ಕೆ ಮಾಡುವಂತೆ ವೇಣುಗೋಪಾಲ್ ಅವರಿಗೆ ದೇವೇಗೌಡರು ಸಲಹೆ ನೀಡಿದ್ದಾರೆ. ಇದೇ ವೇಳೆ ಲೋಕಸಭೆ ಸಂಬಂಧಿತ ಚರ್ಚೆ ನಡೆದಿದ್ದು, ರಾಜಸ್ಥಾನ ಹಾಗೂ ಮಧ್ಯ ಪ್ರದೇಶ ಚುನಾವಣೆಗಳಲ್ಲಿ ಬಿಎಸ್‍ಪಿ ನಾಯಕಿ ಮಾಯಾವತಿ ಕಾಂಗ್ರೆಸ್ ಗೆ ಬೆಂಬಲ ನೀಡದಿರುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು, ಅತಿ ಕಡಿಮೆ ಬೆಲೆಯಲ್ಲಿ ಪೆಟ್ರೋಲ್ ಸಿಗೋ ನಗರಗಳು
ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‍ರೊಂದಿಗೆ ಮಾತನಾಡಿದ್ದೇನೆ. ನಮ್ಮ ಭೇಟಿ ಕೇವಲ ಸೌಜನ್ಯಯುತವಾದದ್ದು. ವೇಣುಗೋಪಾಲ್‍ರವರು ಈ ಬಗ್ಗೆ ಸಿದ್ದರಾಮಯ್ಯ ಹಾಗೂ ಪ್ರಮುಖ ನಾಯಕರ ಜೊತೆ ಮಾತನಾಡಿ ತೀರ್ಮಾನ ಮಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಎಸ್‍ಪಿ ರಾಜ್ಯದಲ್ಲಿ ಒಂದಾಗಿವೆ. ಸರ್ಕಾರದಲ್ಲಿ ಪ್ರಮುಖ ಖಾತೆಯೊಂದನ್ನ ಬಿಎಸ್‍ಪಿಗೆ ನೀಡಿದೆ. ಇದಕ್ಕೆ ಕಾಂಗ್ರೆಸ್ ಕೂಡಾ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ಮಾಯಾವತಿಯವರ ಹೇಳಿಕೆ ಆಧರಿಸಿ ಮಹಾಮೈತ್ರಿಗೆ ಹಿನ್ನೆಡೆ ಎಂದು ಭಾವಿಸುವುದು ತಪ್ಪು. ರಾಜಕೀಯದಲ್ಲಿ ಯಾವುದು ಅಂತಿಮವಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv