ರಾಯಚೂರು: ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿಯಾಗಿದೆ. ಬಡ ಜನತೆಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದರು.
ಅಮೃತ ಮಹೋತ್ಸವ ಹಿನ್ನೆಲೆ ಕಾಂಗ್ರೆಸ್ ಸ್ವಾತಂತ್ರ್ಯೋತ್ಸವ ನಡಿಗೆ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಬೆಲೆ ಏರಿಕೆಯ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದೆ ಇರುವುದೇ ಬಿಜೆಪಿ ಜನ ವಿರೋಧಿ ಸರ್ಕಾರವಾಗಿರುವುದಕ್ಕೆ ಸಾಕ್ಷಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಮದುವೆಗೆ ಮುಸ್ಲಿಂ ವಧು ಹಾಜರ್ – ಮಹಲ್ ಸಮಿತಿಯ ಕ್ಷಮೆಗೆ ಆಗ್ರಹ
Advertisement
Advertisement
ಕೇಂದ್ರ ಸರ್ಕಾರ ಶ್ರೀಮಂತರ ಪರವಾಗಿದ್ದು, ಬಡವರ ವಿರೋಧಿ ಸರ್ಕಾರವಾಗಿದೆ. 9.91 ಲಕ್ಷ ಕೋಟಿ ಶ್ರೀಮಂತರ ಸಾಲ ಮನ್ನಾ ಮಾಡುವ ಮೂಲಕ ಕೇಂದ್ರ ಸರ್ಕಾರ ಶ್ರೀಮಂತರ ಪರವಾಗಿರುವ ಸರ್ಕಾರ ಎಂದು ತೋರಿಸಿಕೊಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
Advertisement
ಈ ವೇಳೆ ಖಂಡ್ರೆ ಅವರ ನೇತೃತ್ವದಲ್ಲಿ ಗಿಲ್ಲೇಸುಗೂರಿನಿಂದ ಯರಗೇರಾ ಗ್ರಾಮದವರೆಗೆ ಪಾದಯಾತ್ರೆ ನಡೆಯಿತು. ಮಾಜಿ ಸಚಿವ ಎಚ್.ಆಂಜಿನೇಯ, ಎಂಎಲ್‍ಸಿ ಶರಣಗೌಡ ಬಯ್ಯಾಪುರ, ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇದನ್ನೂ ಓದಿ: ಜನನಾಂಗಕ್ಕೂ ಟ್ಯಾಟೂ – ಜೀವವೇ ಹೋದಂಗೆ ಆಯ್ತು ಅಂದ ನಟಿ