ನವದೆಹಲಿ: ಸಾಮಾಜಿಕ ಜಾಲತಾಣಗಳಾದ ಪೇಸ್‍ಬುಕ್, ಟ್ವಿಟ್ಟರ್, ಗೂಗಲ್‍ನಲ್ಲಿ ಹರಿದಾಡುವ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಬೇಕೆಂದು ಕೇಂದ್ರ ಕಂಪನಿಗಳೊಂದಿಗೆ ಸಭೆ ನಡೆಸಿ ವಾರ್ನಿಂಗ್ ನೀಡಿದೆ ಎಂದು ವರದಿಯಾಗಿದೆ.
Advertisement
ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ಪ್ರಚಲಿತದಲ್ಲಿರುವ ಫೇಸ್‌ಬುಕ್, ಟ್ವಿಟ್ಟರ್, ಗೂಗಲ್ ಸೇರಿ ಹಲವು ಸಾಮಾಜಿಕ ಜಾಲತಾಣಗಳೊಂದಿಗೆ ಕೇಂದ್ರ ಚರ್ಚಿಸಿದ್ದು, ಪ್ರಮುಖವಾಗಿ ಸುಳ್ಳು ಸುದ್ದಿಗಳನ್ನು ಹರಡದಂತೆ ನಿಯಂತ್ರಿಸಬೇಕೆಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಡಕ್ ವಾರ್ನಿಂಗ್ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: 24 ಗಂಟೆಯ ಒಳಗಡೆ ಆಕ್ಷೇಪಾರ್ಹ ವಿಷಯಗಳನ್ನು ತೆಗೆಯಲೇಬೇಕು – ಕೇಂದ್ರ ಸರ್ಕಾರ
Advertisement
Advertisement
ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಸಾಮಾಜಿಕ ಜಾಲತಾಣ ಕಂಪನಿಗಳ ಜೊತೆ ಚರ್ಚಿಸಿದ ಕೇಂದ್ರ, ಸುಳ್ಳು ಸುದ್ದಿಗಳ ಪ್ರಸಾರವನ್ನು ತಡೆಹಿಡಿಯಬೇಕು. ಈ ಬಗ್ಗೆ ಕೇಂದ್ರ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುತ್ತದೆ. ಈಗಾಗಲೇ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಈ ನಿಯಮಗಳನ್ನು ಪಾಲಿಸದೆ ಇದ್ದರೆ, ಸರಿಯಾದ ಬೆಲೆ ತೆರಬೇಕಾಗುತ್ತದೆ ಎಂದು ಸಭೆಯಲ್ಲಿ ಕಟ್ಟುನಿಟ್ಟಾಗಿ ಸೂಚನೆ ನೀಡಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮಹತ್ವದ ದಾಖಲೆಗಳನ್ನು ವಾಟ್ಸಪ್ ಮಾಡಬೇಡಿ, ಸಭೆಗಳಲ್ಲಿ ಫೋನ್ ಬಳಸಬೇಡಿ – ಕೇಂದ್ರ ಸರ್ಕಾರ ಸೂಚನೆ
Advertisement
📡LIVE Now
Press Conference by Union Ministers @PrakashJavdekar and @rsprasad at National Media Centre, #NewDelhi
Watch on #PIB's
YouTube: https://t.co/6RyOF1ewVs
Facebook: https://t.co/p9g0J6q6qvhttps://t.co/v0S3L5sgtC
— PIB India (@PIB_India) February 25, 2021
ಈಗಾಗಲೇ ಡಿಜಿಟಲ್ ಮೀಡಿಯಾದಲ್ಲಿ ದ್ವೇಷ ಬಿತ್ತುವ ಮತ್ತು ನಕಲಿ ಸುದ್ದಿಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ರೂಪಿಸಿದೆ. ಕೆಲದಿನಗಳ ಹಿಂದೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಮತ್ತು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವ ಪ್ರಕಾಶ್ ಜಾವಡೇಕರ್ ಸುದ್ದಿಗೋಷ್ಠಿ ನಡೆಸಿ ಜಾರಿಗೆ ತರಲಾದ ಹೊಸ ನಿಯಮಗಳನ್ನು ತಿಳಿಸಿದ್ದರು. ಇದನ್ನೂ ಓದಿ: ಏರ್‌ಟೆಲ್‌ನಲ್ಲಿ 7 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಗೂಗಲ್
ನಿಯಮದಲ್ಲಿ ಏನಿದೆ?
ಅಶ್ಲೀಲ, ಮಾನಹಾನಿಕರ, ಆಕ್ಷೇಪಾರ್ಹ, ಅಪ್ರಾಪ್ತ ವಯಸ್ಕರಿಗೆ ಹಾನಿಕಾರಕವಾದ ವಿಷಯ, ಭಾರತದ ಏಕತೆ, ಸಮಗ್ರತೆ, ರಕ್ಷಣೆ, ಭದ್ರತೆ ಅಥವಾ ಸಾರ್ವಭೌಮತ್ವ ಮತ್ತು ಇತರ ದೇಶಗಳೊಂದಿಗಿನ ಸಂಬಂಧಕ್ಕೆ ಧಕ್ಕೆ ತರುವ ವಿಷಯಗಳನ್ನು ನಿಷೇಧಿಸಬೇಕು. ಸಾಮಾಜಿಕ ಜಾಲತಾಣಗಳು ಸೂಚನೆ ನೀಡಿದ ಅಥವಾ ಕೋರ್ಟ್ ಆದೇಶದ 36 ಗಂಟೆಯ ಒಳಗಡೆ ಕಾನೂನುಬಾಹಿರ ವಿಷಯವನ್ನು ತೆಗೆದುಹಾಕಬೇಕು ಅಥವಾ ನಿಷ್ಕ್ರಿಯಗೊಳಿಸಬೇಕು. ಸೋಶಿಯಲ್ ಮೀಡಿಯಾ ಮತ್ತು ಮೆಸೇಜಿಂಗ್ ಸೈಟ್‍ಗಳು ಮಾಹಿತಿಯನ್ನು ಮೊದಲ ಹಾಕಿದವರ ಟ್ರ್ಯಾಕಿಂಗ್ ಮಾಡಬೇಕು. ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು ಅಧಿಕಾರ ಹೊಂದಿರುವ ಸರ್ಕಾರಿ ಸಂಸ್ಥೆಗೆ ಕಂಪನಿಗಳು 72 ಗಂಟೆಯ ಒಳಗಡೆ ಮಾಹಿತಿಯನ್ನು ಒದಗಿಸಬೇಕು. ದೂರು ನೀಡಿದ 24 ಗಂಟೆಗಳ ಒಳಗಡೆ ಕಾನೂನುಬಾಹಿರ ವಿಷಯವನ್ನು ತೆಗೆದುಹಾಕಬೇಕು ಅಥವಾ ನಿಷ್ಕ್ರಿಯಗೊಳಿಸಬೇಕು.
We have decided to have 3 tier mechanism for OTT platforms;
▪️OTT and Digital news media have to disclosed their details
▪️Grievance redressal system for Digital and OTT platforms
▪️Self regulatory body headed by retired SC or HC judge
Union Minister @PrakashJavdekar pic.twitter.com/6QdCK44yxA
— PIB India (@PIB_India) February 25, 2021
ದೂರುಗಳನ್ನು ಸ್ವೀಕರಿಸಲು, ಅಂಗೀಕರಿಸಲು ಮತ್ತು ಒಂದು ತಿಂಗಳೊಳಗೆ ಪರಿಹರಿಸಲು ಕಂಪನಿಗಳು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು. ನಿಯಮವನ್ನು ಜಾರಿಗೊಳಿಸಲು ಮೂರು ಹಂತದ ಕಾರ್ಯವಿಧಾನ ಜಾರಿಯಾಗಬೇಕು. ಸ್ವಯಂ ನಿಯಂತ್ರಣ, ಸ್ವಯಂ-ನಿಯಂತ್ರಿಸುವ ಸಂಸ್ಥೆಗಳಿಂದ ಸ್ವಯಂ ನಿಯಂತ್ರಣ, ಸರ್ಕಾರದ ಮೇಲ್ವಿಚಾರಣೆ. ನೀತಿ ಸಂಹಿತೆಯ ಯಾವುದೇ ಉಲ್ಲಂಘನೆಯ ಕುರಿತು ಸಾರ್ವಜನಿಕರಿಂದ ಎಲ್ಲ ಕುಂದುಕೊರತೆಗಳನ್ನು ಸ್ವೀಕರಿಸಲು ಮತ್ತು ಪ್ರಕ್ರಿಯೆಗೊಳಿಸಲು ಆನ್‍ಲೈನ್ ಪೋರ್ಟಲ್ ತೆರೆಯಬೇಕು. ಕುಂದುಕೊರತೆಯನ್ನು 15 ದಿನಗಳ ಒಳಗಡೆ ಪರಿಹರಿಸಬೇಕು. ಈ ಸೇವೆ ನೀಡುವ ಟೆಕ್ ಕಂಪನಿಗಳು ಕುಂದುಕೊರತೆಯನ್ನು ನಿವಾರಿಸಲು ಅಧಿಕಾರಿಗಳನ್ನು ನೇಮಿಸಬೇಕು. ಕುಂದುಕೊರತೆಯನ್ನು ನಿವಾರಿಸುವ ಅಧಿಕಾರಿ ಭಾರತದಲ್ಲಿ ವಾಸಿಸಬೇಕು ಮತ್ತು ಪ್ರತಿ ಆರು ತಿಂಗಳಿಗೊಮ್ಮೆ ವರದಿ ನೀಡಬೇಕು ತಿಳಿಸಿದೆ.