ಬೆಂಗಳೂರು: ಬೆಲೆ ಏರಿಕೆಗೆ (Price Hike) ಕೇಂದ್ರ ಸರ್ಕಾರವೇ (Union Government) ಕಾರಣ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ದೂರಿದ್ದಾರೆ.
ಪೊಲೀಸ್ ಧ್ವಜ ದಿನಾಚರಣೆ (Police Flag Day) ಪ್ರಯುಕ್ತ ಇಂದು ಕೋರಮಂಗಲದ ಕೆಎಸ್‌ಆರ್‌ಪಿ (KSRP) ಆವರಣರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಪದಕ ನೀಡಿ ಗೌರವಿಸಲಾಯಿತು.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪರಮೇಶ್ವರ್, ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಬೆಲೆ ಏರಿಕೆಯಾಗಿದೆ. ಗ್ಯಾರಂಟಿಗೂ (Congress Guarantee) ಬೆಲೆ ಏರಿಕೆಗೆ ಸಂಬಂಧ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡ್ತಿರೋ ಬಿಜೆಪಿಯವ್ರು ರೈತ ವಿರೋಧಿಗಳು: ಡಿಕೆಶಿ
ಬೆಂಗಳೂರಿನ ಕೆಎಸ್‌ಆರ್‌ಪಿ ಪೆರೇಡ್ ಮೈದಾನದಲ್ಲಿ ಇಂದು ನಡೆದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿಯವರ ಪದಕ ಪ್ರದಾನ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಿದೆ. pic.twitter.com/BctfEz50JX
— Dr. G Parameshwara (@DrParameshwara) April 2, 2025
ರಾಜ್ಯ ಮತ್ತು ಕೇಂದ್ರದ ಸಂಬಂಧ ಸರಿಯಿಲ್ಲ. ನಾವು 20 ಸಾವಿರ ಕೋಟಿ ರೂ.ಗೂ ಹೆಚ್ಚು ತೆರಿಗೆ ಕೊಡುತ್ತೇವೆ. ಅವರು ನಮಗೆ ಬರಬೇಕಾದ ಪಾಲು ವಾಪಸ್ ಕೊಡುತ್ತಿಲ್ಲ. ಹೀಗಾಗಿ ಕೆಲ ಅನಿವಾರ್ಯ ಕಾರಣಗಳಿಂದಾಗಿ ಬೆಲೆ ಏರಿಕೆ ಆಗುತ್ತಿದೆ ಎಂದು ಸರ್ಕಾರದ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡರು. ಇದನ್ನೂ ಓದಿ: ಗ್ಯಾರಂಟಿ ಸರ್ಕಾರದಿಂದ ಶಾಕ್ – ಡೀಸೆಲ್ ದರ 2 ರೂ. ಏರಿಕೆ
ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ, ಡಿಜಿಪಿ ಅಲೋಕ್ ಮೋಹನ್ ಸೇರಿದಂತೆ ರಾಜ್ಯದ ಎಲ್ಲಾ ಹಿರಿಯ ಅಧಿಕಾರಿಗಳು ಭಾಗವಹಿಸಿದರು. ಸುಮಾರು 400 ಹೆಚ್ಚು ಅಧಿಕಾರಿಗಳಿಗೆ ಸಿಎಂ ಪದಕ ವಿತರಣೆ ಮಾಡಿ ಗೌರವಿಸಿದರು.