ನವದೆಹಲಿ: ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ (ಇಡಿ) ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್, ಇದೇ ಜೂನ್ 13ರಂದು ಕೇಂದ್ರದ ವಿರುದ್ಧ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಹಿರಿಯ ನಾಯಕರು ಹಾಗೂ ಸಂಸದರು ಅಂದು ಬೆಳಗ್ಗೆ 9ಕ್ಕೆ ಮುಖ್ಯ ಕಚೇರಿಯಲ್ಲಿ ಹಾಜರಾಗಿ ಮತ್ತು ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಪಕ್ಷ ಕರೆಕೊಟ್ಟಿದೆ.
Advertisement
Advertisement
ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯವು ಸಮನ್ಸ್ ಜಾರಿಮಾಡಿತ್ತು. ಈ ಹಿನ್ನೆಲೆ ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಇದನ್ನೂ ಓದಿ: ಬೀದಿ ನಾಯಿಯನ್ನ ದೊಣ್ಣೆಯಿಂದ ಹೊಡೆದು ಎರಡನೇ ಪ್ಲೋರ್‌ನಿಂದ ಬಿಸಾಕಿದ ಪಾಪಿ – ಪ್ರಕರಣ ದಾಖಲು
Advertisement
Advertisement
ಎಐಸಿಸಿ ಕಚೇರಿಯಿಂದ ಪ್ರಾರಂಭವಾಗಿ ಇಡಿ ಕಚೇರಿವರೆಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪ್ರತಿಭಟನೆಯಲ್ಲಿ ರಾಜ್ಯದಿಂದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಶ್ರೀನಿವಾಸ್ ಬಿವಿ, ಡಿಕೆ ಸುರೇಶ್, ಹೆಚ್‌ಕೆ ಪಾಟೀಲ್, ದಿನೇಶ್ ಗೂಂಡೂರಾವ್ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.