ನವದೆಹಲಿ: ಭಾರತದ ವಿಮಾನಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ದೇಸಿ ಸಂಗೀತವನ್ನು ಬಳಸುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ನಿಲ್ದಾಣ ನಿರ್ವಹಣಾ ಸಂಸ್ಥೆಗಳು ಮತ್ತು ಭಾರತದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ವಿಮಾನಯಾನ ಕಂಪನಿಗಳಿಗೆ ಸೂಚಿಸಿದೆ. ಈ ಬಗ್ಗೆ ಭಾರತೀಯ ಸಾಂಸ್ಕೃತಿಕ ಸಂಶೋಧನಾ ಮಂಡಳಿಯ ಮನವಿಯನ್ನು ಉಲ್ಲೇಖಿಸಿ ಈ ಪತ್ರ ಬರೆದಿದೆ.
ಭಾರತೀಯ ಸಾಂಸ್ಕೃತಿಕ ಸಂಶೋಧನಾ ಮಂಡಳಿಯು ಭಾರತದಲ್ಲಿ ಸಂಚರಿಸುವ ವಿಮಾನಗಳು ಮತ್ತು ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭಾರತೀಯ ಸಂಗೀತವನ್ನು ಬಳಕೆ ಮಾಡಲು ಸೂಚಿಸುವಂತೆ ಮನವಿ ಮಾಡಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದಿತ್ತು.
Advertisement
Advertisement
ಈ ಪತ್ರ ಆಧರಿಸಿ ಸೂಚನೆ ನೀಡಿರುವ ಸಚಿವಾಲಯ, ಭಾರತದಲ್ಲಿ ಸಂಗೀತವು ಸಾಮಾಜಿಕ-ಧಾರ್ಮಿಕ ಜೀವನದ ಅವಿಭಾಜ್ಯ ಅಂಗವಾಗಿ ಪ್ರಾರಂಭವಾಯಿತು. ವಿದೇಶಿ ವಿಮಾನಗಳು ಬಳಸುವ ಸಂಗೀತ ಆಯಾ ದೇಶಗಳ ಸಂಗೀತವಾಗಿದೆ. ಅಮೇರಿಕನ್ ಏರ್‌ಲೈನ್ಸ್ನಲ್ಲಿ ಜಾಝ್, ಆಸ್ಟಿçಯನ್ ಏರ್‌ಲೈನ್ಸ್ ನಲ್ಲಿ ಮೊಜಾರ್ಟ್ ಮತ್ತು ಮಧ್ಯಪ್ರಾಚ್ಯದ ವಿಮಾನಯಾನದಲ್ಲಿ ಅರಬ್ ಸಂಗೀತ ಪ್ರಸಾರ ಮಾಡಲಾಗುತ್ತಿದೆ. ಅದರಂತೆ ಭಾರತದ ವಿಮಾನಗಳಲ್ಲಿ ಭಾರತೀಯ ಸಂಗೀತ ಬಳಕೆ ಮಾಡಬೇಕು ಎಂದು ಪತ್ರದ ಮೂಲಕ ಸೂಚಿಸಿದೆ. ಇದನ್ನೂ ಓದಿ: ಮಾಜಿ ಸಿಎಂ ಎಚ್‌ಡಿಕೆ ಒಳ್ಳೆಯ ನಾಯಕ ಹಾಗೂ ಸಾಹಿತಿ: ಡಿಕೆಶಿ ವ್ಯಂಗ್ಯ
Advertisement
Advertisement
ಭಾರತೀಯ ವಿಮಾನಯಾನ ಸಂಸ್ಥೆಗಳು ವಿಮಾನದಲ್ಲಿ ಭಾರತೀಯ ಸಂಗೀತವನ್ನು ಅಪರೂಪವಾಗಿ ಬಳಕೆ ಮಾಡುತ್ತಿವೆ. ನಮ್ಮ ಭಾರತೀಯ ಸಂಗೀತವು ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯನ್ನು ಹೊಂದಿದೆ. ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವ ಅನೇಕ ವಿಷಯಗಳಲ್ಲಿ ಇದು ಕೂಡ ಒಂದಾಗಿದೆ. ಹೀಗಾಗಿ ಭಾರತೀಯ ಸಂಗೀತಕ್ಕೆ ಆದ್ಯತೆ ನೀಡಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಉಷಾ ಪಾಧಿ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣ ನಿರ್ವಾಹಕರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣ’